Mysore
18
overcast clouds

Social Media

ಬುಧವಾರ, 28 ಜನವರಿ 2026
Light
Dark

ರಸ್ತೆ ಬದಿ ಫಾಸ್ಟ್‌ಫುಡ್‌ ವಾಹನಕ್ಕೆ ಕಾರು ಡಿಕ್ಕಿ

Car hits fast food vehicle on roadside

ಮೈಸೂರು : ವೇಗವಾಗಿ ಬಂದ ಕಾರು ರಸ್ತೆ ಬದಿಯ ಫಾಸ್ಟ್ ಫುಡ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ನಗರದಲ್ಲಿ ನಡೆದಿದ್ದು, ಈ ಸಂಬಂದ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

ಕೋಲಾರ ಮೂಲದ ನಾಲ್ವರು ಯುವಕರು ಕಾರಿನಲ್ಲಿ ನಂಜನಗೂಡು ದೇವಾಲಯಕ್ಕೆ ತೆರಳಿ ಉತ್ತಮನಹಳ್ಳಿ ಮೂಲಕ ಚಾಮುಂಡಿಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡಿದೆ.
ಇದರಿಂದಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ಲೋಕೇಶ್ ಎಂಬವರ ಫಾಸ್ಟ್‌ಫುಡ್ ವಾಹನಕ್ಕೆ ಕಾರು ಢಿಕ್ಕಿ ಹೊಡೆದಿದೆ. ಇದರಿಂದಾಗಿ ಕಾರಿನ ಮುಂಭಾಗ ಹಾಗೂ ಫಾಸ್ಟ್ ಫುಡ್ ವಾಹನ ಸಂಪೂರ್ಣ ಜಖಂಗೊಂಡಿದೆ.

ಈ ಸಂಬಂದ ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Tags:
error: Content is protected !!