ಮೈಸೂರು: ಕೃಷಿ ಕೈಗಾರಿಕೆಯಾಗಿ ಪರಿವರ್ತನೆಯಾಗುತ್ತಿರುವಾಗ ರೈತರಿಗೆ ನೇರವಾಗಿ ಹೆಚ್ಚಿನ ಲಾಭ ದೊರಕಬೇಕು. ಕೈಗಾರಿಕೋದ್ಯಮಿಗಳ ಕೈಗೆ ಸಿಗದಂತೆ ಎಚ್ಚರ ವಹಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.
ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ವತಿಯಿಂದ ನಗರದ ನಂಜರಾಜ ಬಹದ್ಧೂರ್ ಛತ್ರದಲ್ಲಿ ಆಯೋಜಿಸಿದ್ದ ಮೂರು ದಿನಗಳ ‘ಸಿರಿಧಾನ್ಯ ಸಂಭ್ರಮಕ್ಕೆ’ ಚಾಲನೆ ನೀಡಿ ಮಾತನಾಡಿದ ಅವರು, ಮೈಸೂರು ಹಾಗೂ ಚಾಮರಾಜನಗರ ಭಾಗದ ರೈತರು ಹೆಚ್ಚಾಗಿ ಸಾವಯವ ಕೃಷಿಯಲ್ಲಿ ತೊಡಸಿಕೊಳ್ಳುವಂತಾಗಲಿ ಎಂದು ಹೇಳಿದರು.
ಭಾರತವು ಮೂಲತಃ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಗ್ರಾಮೀಣ ಭಾಗದ ಜನರ ಮೂಲ ಕಸುಬು ಕೃಷಿಯಾಗಿದೆ. ಅಗತ್ಯಕ್ಕೆ ತಕ್ಕಂತೆ ವೈಜ್ಞಾನಿಕವಾಗಿ ಆಹಾರ ಉತ್ಪಾದಿಸುವ ಜೊತೆಗೆ ಕೃಷಿಯು ರೈತರ ಕೈಯಲ್ಲೆ ಇರಬೇಕು. ಕೃಷಿ ಕೈಗಾರಿಕೆಯಾಗಿ ಪರಿವರ್ತನೆಯಾಗುತ್ತಿರುವಾಗ ರೈತರಿಗೆ ನೇರವಾಗಿ ಹೆಚ್ಚಿನ ಲಾಭ ದೊರಕಬೇಕು. ಕೈಗಾರಿಕೋದ್ಯಮಿಗಳ ಕೈಗೆ ಸಿಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.
ಕೊಲಂಬಸ್ ಭಾರತಕ್ಕೆ ಬರುವ ಮುನ್ನವೇ ಬಣ್ಣದ ಜೋಳ ಬೆಳೆಯಲಾಗುತ್ತಿತ್ತು ಎಂಬ ಮಾಹಿತಿ ಇದೆ. ರಾಸಯನಿಕ ಗೊಬ್ಬರ ಬಳಸದೇ ಮಣ್ಣಿನ ಫಲವತ್ತತೆ ಕಾಪಾಡುವ ಸಾವಯವ ಕೃಷಿಗೆ ನಾವೆಲ್ಲರೂ ಬೆಂಬಲ ಕೊಡಬೇಕು ಎಂದರು.
ರೈತರು ಸಾವಯವ ಕೃಷಿಯಲ್ಲಿ ತೊಡಗಲು ರಾಜ್ಯ ಸರ್ಕಾರ ಹೆಕ್ಟೇರ್‌ಗೆ ಹತ್ತು ಸಾವಿರ ರೂ. ನೀಡುವ ಮೂಲಕ ಸಿರಿಧಾನ್ಯ ಉತ್ಪಾದನೆಯನ್ನು ಉತ್ತೇಜಿಸುತ್ತಿದೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಕೃಷಿ ಸಚಿವರು ನಮ್ಮೆಲ್ಲರನ್ನೂ ಸೇರಿಸಿ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಆಚರಣೆಯನ್ನು ಮಾಡಿದ್ದರು ಎಂದು ತಿಳಿಸಿದರು.
ನಟಿ, ರಂಗಕರ್ಮಿ ಅಕ್ಷತಾ ಪಾಂಡವಪುರ ಅವರು ಪೌಷ್ಠಿಕ ಪಾಕ ಪುಸ್ತಕವನ್ನು ಲೋಕಾರ್ಪಣೆ ಮಾಡಿದರು. ಹಾವೇರಿಯ ಸಿರಿಧಾನ್ಯ ಸಂರಕ್ಷಕ ವೀರಭದ್ರಯ್ಯ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ದೇವಧಾನ್ಯ ರೈತ ಉತ್ಪಾದಕರ ಕಂಪನಿ ನಿರ್ದೇಶಕಿ ಸಾವಿತ್ರಿ ಕೊಡ್ಲಿ, ಸಹಜ ಸಮೃದ್ಧ ಸಂಸ್ಥೆಯ ನಿರ್ದೇಶಕ ಜಿ.ಕೃಷ್ಣಪ್ರಸಾದ್ ಇದ್ದರು.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…