ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಹೇಮಲತಾ ಎಂಬ ಮಹಿಳೆ ಮೇಲೆ ಶುಕ್ರವಾರ(ಜು.19) ಬ್ಯಾರನ್ ಗೋಡೆ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಸಾವೀಗೀಡಾದ್ದರು. ಈ ಹಿನ್ನೆಲೆ ಮೈಮುಲ್ ಮಾಜಿ ಅಧ್ಯಕ್ಷ ಪಿ.ಎಂ ಪ್ರಸನ್ನ ಇಂದು(ಜು.20)ಮುಂಜಾನೆ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ಘಟನೆ ವಿವರ:
ಮಳೆಯ ಅವಾಂತರದಿಂದ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಶಿವರಾಜ್ ಎಂಬವರ ಪತ್ನಿ ಹೇಮಲತಾ ನಿನ್ನೆ(ಜು.19)ಬ್ಯಾರನ್ ಗೋಡೆ ಕುಸಿದು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದರು.
ಹೇಮಾವತಿ ಅವರು ನಿನ್ನೆ ಮಧ್ಯಾಹ್ನ ತಮ್ಮ ಎರಡು ವರ್ಷದ ಗಂಡು ಮಗುವಿನೊಂದಿಗೆ ಮನೆಯ ಹಿಂಭಾಗದ ಶೌಚಲಯಕ್ಕೆ ಹೋಗಿದ್ದರು. ಈ ವೇಳೆ ಪಕ್ಕದಲ್ಲಿ ತಂಬಾಕು ಬ್ಯಾರನ್ ಗೋಡೆ ಕುಸಿಯಲಾರಂಭಿಸಿದೆ. ಇದನ್ನು ಗಮನಿಸಿದ ಮಹಿಳೆ ಹೇಮಾವತಿ ಮಗುವನ್ನು ಮುಂದಕ್ಕೆ ಎಸೆದು, ತಾವು ಪಾರಾಗುವ ಯತ್ನದಲ್ಲಿದ್ದಾಗ ಪೂರ್ತಿ ಗೋಡೆ ಅವರ ಮೇಲೆ ಬಿದ್ದು ಸಾವನ್ನಪ್ಪಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…