ಮೈಸೂರು

ಜಾತಿ ವ್ಯವಸ್ಥೆ ದೇವರು ಮಾಡಿದ್ದಲ್ಲ, ಕೆಲವರು ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆ ತಂದರು : ಸಿದ್ದರಾಮಯ್ಯ

ನಂಜನಗೂಡು : ಜಾತಿ ವ್ಯವಸ್ಥೆಯಿಂದ ಅಸಮಾನತೆ ನಿರ್ಮಾಣವಾಗಿತ್ತು.ಕೆಲವರು ತಮ್ಮ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆಯನ್ನು ತಂದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಂಜನಗೂಡಿನಲ್ಲಿ ನಡೆದ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 133ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವರು ಈ ದೇಶದಲ್ಲಿ ಜಾತಿ ಚಾತುರ್ವರ್ಣ ಪದ್ಧತಿ ತಂದು ಹೇರಿದರು. ಜಾತಿ ಪದ್ಧತಿಯನ್ನು ದೇವರು ಮಾಡಿದ್ದಲ್ಲ. ಕೆಲವರು ತಮ್ಮ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆಯನ್ನು ನಿರ್ಮಾಣ ಮಾಡಿದರು ಎಂದು ಅಭಿಪ್ರಾಯಪಟ್ಟರು.

ಆದರೆ, ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಈ ದೇಶಕ್ಕೆ ಒಂದು ಸಂವಿಧಾನವನ್ನು ನೀಡಿದ್ದಾರೆ. ಅದರಲ್ಲಿ ಸಮಾಜವನ್ನು ಯಾವ ರೀತಿ ಕಟ್ಟಬೇಕು ಎಂಬುದನ್ನು ಹೇಳಿದ್ದಾರೆ. ತಮ್ಮ ಜೀವಮಾನವಿಡಿ ಯಾರಿಗಾಗಿ ಹೋರಾಟ ಮಾಡಿದರು? ಮತ್ತು ನಮಗೆಲ್ಲ ಏನು ಹೇಳಿದ್ದಾರೆ ಹಾಗೆ ನಡೆದುಕೊಳ್ಳೋದೇ ಅವರಿಗೆ ನೀಡುವ ಗೌರವ. ಅಂಬೇಡ್ಕರ್‌ ಗುಣಗಾನ ಮಾಡೋಣ ಆದರೆ ಅವರು ಹೇಳಿದ ಹಾಗೆ ನಡೆದುಕೊಳ್ಳೋದು ಮುಖ್ಯವಾದದ್ದು ಎಂದು ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

4 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

4 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

4 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

4 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

4 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

4 hours ago