ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ 27ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ಅರಮನೆಯ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಲದರ್ಶಿನಿಯ ಅತಿಥಿಗೃಹದಲ್ಲಿ ಬುಧವಾರ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ, ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ಬ್ಲಾಗರ್ಸ್ ಮೀಟ್ ಮತ್ತು ಇತರೆ ಪ್ರವಾಸೋದ್ಯಮ ಚಟುವಟಿಕೆಗಳ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.
ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ವಿಷಯದ ಮೇಲೆ ಹತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಉತ್ತಮ ಪರಿಕಲ್ಪನೆಯಾಗಿದೆ. ಕಾರ್ಯಕ್ರಮದ ದಿನದಂದು ಅರಮನೆಯ ಮುಂಭಾಗದಲ್ಲಿ ಹೆಚ್ಚಿನ ಅತಿಥಿ ಪ್ರವಾಸಿಗರನ್ನು ಆಹ್ವಾನಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿ ಎಂದು ಹೇಳಿದರು.
ವಿವಿಧ ಜಾನಪದ ಕಲಾ ತಂಡಗಳ ಮೆರಣಿಗೆ, ನೃತ್ಯ ಪ್ರದರ್ಶನ ಸೇರಿದಂತೆ ಪ್ರವಾಸಿಗರ ಗಮನ ಸೆಳೆಯುವಂಥ ಕಾರ್ಯಕ್ರಮ ಆಯೋಜಿಸಿ. ಕಲಾತಂಡಗಳನ್ನು ಹೊರತುಪಡಿಸಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳೀಯ ಸಂಸ್ಕೃತಿ ಬಿಂಬಿಸುವಂಥ ಧಿರಿಸನ್ನು ಧರಿಸುವಂತೆ ಸೂಚಿಸಿದರು.
ಸೆ.12 ರಂದು ಸೋಮನಾಥಪುರ ಉತ್ಸವ
ವಿಶ್ವ ಪರಂಪರೆ ತಾಣವಾಗಿ ಗುರುತಿಸಲ್ಪಟ್ಟಿರುವ ಸೋಮನಾಥಪುರದ ಉತ್ಸವವನ್ನು ಸೆಪ್ಟೆಂಬರ್ 12ರಂದು ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಭಾರತೀಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಎಂ.ಕೆ.ಸವಿತಾ ಅವರು ಮಾಹಿತಿ ನೀಡಿದರು.
ಅಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿ ಹೊಂದಿರುವ ಬ್ಲಾಗರ್ಸ್ ಗಳನ್ನು ಕರೆಸಲಾಗುತ್ತಿದ್ದು, ಬಂದಂತಹ ಅತಿಥಿಗಳನ್ನು ಉತ್ತಮವಾಗಿ ಸತ್ಕರಿಸಲಾಗುವುದು. ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಮೈಸೂರು ಅರಮನೆ ಮಂಡಳಿಯ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಭುಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ.ಡಿ.ಸುದರ್ಶನ್ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…