ಮೈಸೂರು

ಸಂಭ್ರಮದಿಂದ ಪ್ರವಾಸೋದ್ಯಮ ದಿನ ಆಚರಿಸಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ 27ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ಅರಮನೆಯ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಲದರ್ಶಿನಿಯ ಅತಿಥಿಗೃಹದಲ್ಲಿ ಬುಧವಾರ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ, ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ಬ್ಲಾಗರ್ಸ್ ಮೀಟ್ ಮತ್ತು ಇತರೆ ಪ್ರವಾಸೋದ್ಯಮ ಚಟುವಟಿಕೆಗಳ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.

ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ವಿಷಯದ ಮೇಲೆ ಹತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಉತ್ತಮ ಪರಿಕಲ್ಪನೆಯಾಗಿದೆ. ಕಾರ್ಯಕ್ರಮದ ದಿನದಂದು ಅರಮನೆಯ ಮುಂಭಾಗದಲ್ಲಿ ಹೆಚ್ಚಿನ ಅತಿಥಿ ಪ್ರವಾಸಿಗರನ್ನು ಆಹ್ವಾನಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿ ಎಂದು ಹೇಳಿದರು.

ವಿವಿಧ ಜಾನಪದ ಕಲಾ ತಂಡಗಳ ಮೆರಣಿಗೆ, ನೃತ್ಯ ಪ್ರದರ್ಶನ ಸೇರಿದಂತೆ ಪ್ರವಾಸಿಗರ ಗಮನ ಸೆಳೆಯುವಂಥ ಕಾರ್ಯಕ್ರಮ ಆಯೋಜಿಸಿ. ಕಲಾತಂಡಗಳನ್ನು ಹೊರತುಪಡಿಸಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳೀಯ ಸಂಸ್ಕೃತಿ ಬಿಂಬಿಸುವಂಥ ಧಿರಿಸನ್ನು ಧರಿಸುವಂತೆ ಸೂಚಿಸಿದರು.

ಸೆ.12 ರಂದು ಸೋಮನಾಥಪುರ ಉತ್ಸವ

ವಿಶ್ವ ಪರಂಪರೆ ತಾಣವಾಗಿ ಗುರುತಿಸಲ್ಪಟ್ಟಿರುವ ಸೋಮನಾಥಪುರದ ಉತ್ಸವವನ್ನು ಸೆಪ್ಟೆಂಬರ್ 12ರಂದು ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಭಾರತೀಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಎಂ.ಕೆ.ಸವಿತಾ ಅವರು ಮಾಹಿತಿ ನೀಡಿದರು.

ಅಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿ ಹೊಂದಿರುವ ಬ್ಲಾಗರ್ಸ್ ಗಳನ್ನು ಕರೆಸಲಾಗುತ್ತಿದ್ದು, ಬಂದಂತಹ ಅತಿಥಿಗಳನ್ನು ಉತ್ತಮವಾಗಿ ಸತ್ಕರಿಸಲಾಗುವುದು. ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಮೈಸೂರು ಅರಮನೆ ಮಂಡಳಿಯ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಭುಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ.ಡಿ.ಸುದರ್ಶನ್ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ಒಂದೇ ವಾರದಲ್ಲಿ 702 ಹಾವು ಕಡಿತ, 6 ಸಾವು!

ಬೆಂಗಳೂರು: ರಾಜ್ಯದಲ್ಲಿ ಒಂದೇ ವಾರದಲ್ಲಿ 702 ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲೂ…

2 hours ago

ರೈಲು ಪ್ರಯಾಣಿಕರೇ ಗಮನಿಸಿ: ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್‌ ಚಾರ್ಜಿಂಗ್‌ ಬಂದ್‌!

ನವದೆಹಲಿ: ರೈಲಿನಲ್ಲಿ ಪ್ರಯಾಣಿಸುವವರೇ ಗಮನಿಸಿ! ರಾತ್ರಿ ಪ್ರಯಾಣದ ವೇಳೆ ಮೊಬೈಲ್‌ ಚಾರ್ಜ್‌ ಮಾಡಿಕೊಳ್ಳುವ ಯೋಚನೆಯಿದ್ದರೆ ಈ ಮಾಹಿತಿ ತಿಳಿದುಕೊಳ್ಳಿ. ರಾತ್ರಿ…

2 hours ago

ಓದುಗರ ಪತ್ರ: ಕಿಡಿಗೇಡಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ವಿಜಯನಗರ ರೈಲ್ವೆ ಬಡಾವಣೆಯ ಹತ್ತನೇ ಕ್ರಾಸ್ ಮತ್ತು ಇತರೆ ಕ್ರಾಸ್ ರಸ್ತೆಗಳಲ್ಲಿ ಮನೆಗಳ ಮುಂದೆ ಕಾರುಗಳನ್ನು ನಿಲ್ಲಿಸುತ್ತಿದ್ದು, ಕಳೆದ…

4 hours ago

ಓದುಗರ ಪತ್ರ: ಖರ್ಗೆಯವರ ಮಾತುಗಳು ಖಂಡನೀಯ

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಂದೆಯನ್ನು ಕುರಿತಂತೆ ಅವಹೇಳನಾಕಾರಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಕರನ್ನು ಬೋಧಕೇತರ ಕಾರ್ಯಗಳಿಗೆ ನಿಯೋಜಿಸದಿರಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳ ದಿಢೀರ್ ಬದಲಾವಣೆಯಿಂದ ಶಾಲಾ…

4 hours ago

ಓದುಗರ ಪತ್ರ: ಮತದಾರರ ಹೆಸರು ಡಿಲಿಟ್: ಸ್ಪಷ್ಟನೆ ಅಗತ್ಯ

ಚುನಾವಣಾ ಆಯೋಗವು ನಡೆಸಿದ್ದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಯ ನಂತರ ಕರ್ನಾಟಕದ ಮತದಾರರ ಪಟ್ಟಿಯಿಂದ ಸುಮಾರು ಒಂದು…

4 hours ago