ಗಣ್ಯರ ಶುಭ ಹಾರೈಕೆ, ಹಾಡಿ ಕುಣಿದ ವಿದ್ಯಾರ್ಥಿಗಳು
ಮೈಸೂರು: ನಗರದ ಜಯಲಕ್ಷ್ಮಿಪುರಂನಲ್ಲಿರುವ ಸೇಂಟ್ ಜೋಸೆಫ್ ಕಾಲೇಜಿಗೆ ಸುವರ್ಣ ಸಂಭ್ರಮದ ಅಂಗವಾಗಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಮೆರುಗು ಹೆಚ್ಚಿಸಿತು.
50 ರ ಸಂಭ್ರಮದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೈಸೂರು ವಿ.ವಿ.ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕಾದಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯವಾಗುತ್ತದೆ. ಅಂತಹ ಅತ್ಯುತ್ತಮ ಶಿಕ್ಷಕರ ಮೂಲಕ ಗುಣಮಟ್ಟದ ಶಿಕ್ಷಣವನ್ನು ನೀಡುವ ಸಂಸ್ಥೆ ಇದಾಗಿದೆ ಎಂದು ಪ್ರಶಂಶಿಸಿದರು.
ಪ್ರಾಥಮಿಕ, ಪ್ರೌಢ ಶಿಕ್ಷಣ ನೀಡುವ ಶಿಕ್ಷಕರು ಎಂದಿಗೂ ವಿಭಿನ್ನವಾಗಿ ನಿಲ್ಲುತ್ತಾರೆ. ಅವರು ಮಕ್ಕಳಿಗೆ ಪಠ್ಯಪುಸ್ತಕದಲ್ಲಿರುವ ವಿಷಯವನ್ನು ಕಲಿಸುವುದಕಷ್ಟೇ ಸೀಮಿತವಾಗಿರದೆ ಅವರ ಭವಿಷ್ಯಕ್ಕೆ ಬೇಕಾದ ಪಠ್ಯೇತರ ಶಿಕ್ಷಣವನ್ನು ನಿಸ್ವಾರ್ಥತೆಯಿಂದ ಕಲಿಸುತ್ತಾರೆ ಎಂದರು.
ಇದೇ ವೇಳೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
ಮೈಸೂರು ಬಿಷಫ್ ಡಾ.ಕೆ.ಅಂತೋಣಿ ವಿಲಿಯಂ, ಮುಕ್ತ ವಿವಿ ಪ್ರಭಾರ ಕುಲಪತಿ ಡಾ.ಎ.ಖಾದರ್ ಪಾಷ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ.ಎಂ.ಎಸ್.ಗಿರಿಧರ್ ರಾವ್, ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಡಾ.ಎ.ಪಿ.ಜ್ಞಾನಪ್ರಕಾಶ್, ಕೆಎಸ್‌ಒಯು ಪರೀಕ್ಷಾಂಗ ಕುಲಸಚಿವ ಡಾ.ಕೆ.ಬಿ.ಪ್ರವೀಣ್, ಮೈಸೂರು ವಿವಿ ಸಿಡಿಸಿ ನಿರ್ದೇಶಕ ಡಾ.ಎನ್.ಕೆ.ಲೋಕನಾಥ್, ಸೇಂಟ್ ಜೋಸೆಫ್ ಸಂಸ್ಥೆಯ ಡಾ.ಥಾಮಸ್ ಆಂಟನಿ ವಾಳಪಿಳೈ, ಆಲ್ ಫ್ರೆಡ್ ಜಾನ್ ಮೆಂಡೊಂಕ, ಡೊಮಿನಿಕ್ ವಾಜ್, ಪ್ರಾಂಶುಪಾಲರಾದ ಡಾ.ಪ್ರಿಯಾ ಮ್ಯಾಥ್ಯೂ, ಸಂಸ್ಥೆ ಕಾರ್ಯದರ್ಶಿ ಫಾ.ವಿಜಯಕುಮಾರ್ ಇನ್ನಿತರರು ಉಪಸ್ಥಿತರಿದ್ದರು.
ಕಳೆದ 50 ವರ್ಷಗಳಲ್ಲಿ ಹಲವು ಸಾಧಕರನ್ನು ದೇಶಕ್ಕೆ ಕೊಡುಗೆ ನೀಡಿದ ಹೆಗ್ಗಳಿಕೆ ಈ ಸಂಸ್ಥೆಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿದ್ದಾರೆ. ಈ ಮೂಲಕ ಸಂಸ್ಥೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ.
-ಪ್ರೊ.ಜಿ.ಹೇಮಂತ್ ಕುವಾರ್, ಮೈಸೂರು ವಿ.ವಿ.ಕುಲಪತಿ
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…