ಮೈಸೂರು: ಇಂದು 76ನೇ ಗಣರಾಜ್ಯೋತ್ಸವ ಆಚರಣೆ ಹಿನ್ನಲೆ ದೇಶ ಹಾಗೂ ರಾಜ್ಯದೆಲ್ಲೆಡೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ.
ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮೈದಾನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಿದರು.
ಮೈಸೂರಿನ ಪಂಜಿನ ಕಾಯಯತು ಮೈದಾನದಲ್ಲಿ ಸಚಿವ ಮಹದೇವಪ್ಪ ಧ್ವಜರೋಹಣ ಮಾಡಿ ಗಣರಾಜ್ಯೋತ್ಸವದ ಸಂದೇಶ ನೀಡಿದರು.
ರಾಜ್ಯದೆಲ್ಲೆಡೆ ಆಯಾ ಜಿಲ್ಲಾ ಸಚಿವರ ನೇತೃತ್ವದಲ್ಲಿ ಧ್ವಜಾರೋಹಣ ಮಾಡಲಾಯಿತು. ಬಳಿಕ ಧ್ವಜವಂದನೆ ಸ್ವೀಕರಸಿ ಪೆರೇಡ್ ಪರಿವೀಕ್ಷಣೆ ನಡೆಸಿದರು. ಪೊಲೀಸ್ ಇಲಾಖೆ, ಕೆ ಎಸ್ ಆರ್ ಪಿ ತುಕಡಿ, ಗೃಹ ರಕ್ಷಕ ದಳ, ಅಬಕಾರಿ ಇಲಾಖೆ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿದ ಶಾಲಾ ಕಾಲೇಜುಗಳ ಮಕ್ಕಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಬಳಿಕ ಸಚಿವರು ಗಣರಾಜ್ಯೋತ್ಸವ ಸಂದೇಶವನ್ನು ನೀಡಿದರು.
ಕಾವೇರಿ ನಿಗಮ ಕಚೇರಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ
ಮೈಸೂರಿನ ಗೋಕುಲಂನಲ್ಲಿರುವ ಕಾವೇರಿ ನೀರಾವರಿ ನಿಗಮದ ಕಚೇರಿ ಆವರಣದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಲಾಯಿತು. ಈ ವೇಳೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಸ್.ಮಹೇಶ್, ಮುಖ್ಯ ಇಂಜಿನಿಯರ್ ಆರ್.ಎಲ್.ವೆಂಕಟೇಶ್,ಕಾರ್ಯಪಾಲಕ ಅಭಿಯಂತರ ಭಾಸ್ಕರ್ ಮತ್ತಿತರ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಜರಿದ್ದರು.