ಮೈಸೂರು: ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವೋಟ್ ಚೋರಿ ಸಹಿ ಸಂಗ್ರಹ ಸಭೆಯಲ್ಲಿ ಮಾತನಾಡುವಾಗ ಕೇಂದ್ರ ಚುನಾವಣಾ ಆಯುಕ್ತರನ್ನು ರಾಜಕೀಯ ಪುಢಾರಿ ಎಂದು ಹೇಳಿದ್ದಾರೆ.
ಇದನ್ನೂ ಓದಿ:-ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಿ: ಜ್ಞಾನಪ್ರಕಾಶ್ ಸ್ವಾಮೀಜಿ ಆಗ್ರಹ
ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ ರೀತಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಸಾಕ್ಷಿ ಸಮೇತ ದೂರು ಕೊಟ್ಟಿದ್ದಾರೆ. ಆದರೆ ದೂರು ಕೊಟ್ಟವರ ಮೇಲೆಯೇ ಚುನಾವಣಾ ಆಯುಕ್ತರು ಮಾತನಾಡುತ್ತಿದ್ದಾರೆ. ಆರೋಪ ಮಾಡಿರುವವರ ಮೇಲೆಯೇ ದಾಳಿ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬಗ್ಗೆ ಟೀಕೆ ಮಾಡಿದ್ದಾರೆ.




