ಮೈಸೂರು: ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ವಿಧಾನಪರಿಷತ್ ನೂತನ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇಂದು ( ಜೂನ್ 23 ) ಮೈಸೂರಿನ ಆಲನಹಳ್ಳಿಯಲ್ಲಿರುವ ಕುದೇರು ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ನಿರಂತರ ಹೋರಾಟ ಮಾಡುತ್ತಿದ್ದಾರೆ, ಬಿಜೆಪಿ ಪ್ರತಿಭಟನೆ ಮಾಡುವುದಕ್ಕೆ ಯಾವುದೇ ನೈತಿಕ ಹಕ್ಕಿಲ್ಲ. ದೇಶದಲ್ಲಿ ತೈಲ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ. ಚುನಾವಣೆ ಸಮಯದಲ್ಲಿ ತೈಲ ಬೆಲೆಯನ್ನು ಕಡಿಮೆ ಮಾಡಿದ್ದರು. ಈಗ ಮತ್ತೆ ಬೆಲೆಯನ್ನು ಏರಿಕೆ ಮಾಡುತ್ತಲೇ ಬರುತ್ತಿದ್ದಾರೆ. ಕೇಂದ್ರ ಸರ್ಕಾರ ಜನಸಾಮಾನ್ಯರ ಜೀವದ ಜೊತೆ ಆಟವಾಡುತ್ತಿದೆ. ಬಡವರು ಹಾಗೂ ರೈತರನ್ನು ತೀರ ಸಂಕಷ್ಟಕ್ಕೆ ಸಿಲುಕಿಸುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಇದೇ ವೇಳೆ ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಮಾತನಾಡಿದ ಅವರು ಚನ್ನಪಟ್ಟಣ ಗ್ರೌಂಡ್ ರಿಯಾಲಿಟಿ ನನಗೆ ಗೊತ್ತಿಲ್ಲ. ನಮ್ಮ ಪಕ್ಷದ ವರಿಷ್ಠರು, ಸ್ಥಳೀಯ ಕಾರ್ಯಕರ್ತರುಗಳೆಲ್ಲಾ ಕುಳಿತು ಅಭ್ಯರ್ಥಿ ಆಯ್ಕೆ ಮಾಡುತ್ತಾರೆ ಎಂದರು.





