ಮೈಸೂರು

ಮೈಸೂರು | ಜೆ.ಜೆ.ಎಂ. ಕಾಮಗಾರಿ ಪರಿಶೀಲಿಸಿದ ಸಿಇಓ ಯುಕೇಶ್

ಮೈಸೂರು : ಜಲ ಜೀವನ್ ಮಿಷನ್ ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರ ನಂಜನಗೂಡು ತಾಲ್ಲೂಕಿನ ತಾಂಡವಪುರ, ಸುತ್ತೂರು ,ಹದಿನಾರು ಗ್ರಾಮ ಪಂಚಾಯಿತಿ ಹಾಗೂ ತಿ.ನರಸೀಪುರ ತಾಲೂಕಿನ ಸೋಸಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗದ್ದೆಮೋಳೆ ಗ್ರಾಮ ಹಾಗೂ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸ ಕೆಂಪಯ್ಯನಹುಂಡಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಂಜನಗೂಡು ತಾಲೂಕು ತಾಂಡವಪುರ ಮತ್ತು ಇತರೆ 31 ಜನವಸತಿಗಳಿಗೆ DBOT ಆಧಾರಿತ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಯ ಪರಿಶೀಲನೆ ನಡೆಸಿ, ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ತಿ. ನರಸೀಪುರ ತಾಲೂಕಿನ ಸೋಸಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗದ್ದೆಮೋಳೆ ಗ್ರಾಮದ ಅಂಗನವಾಡಿಗೆ ಭೇಟಿ ನೀಡಿ ಮಕ್ಕಳ ಹಾಜರಾತಿ ಪರಿಶೀಲಿಸಿದರು. ಹಾಗೂ ಗರ್ಭಿಣಿಯರಿಗೆ ನಿಗಧಿತ ಸಮಯದಲ್ಲಿ ಆಹಾರವನ್ನು ಪೂರೈಸಲು ಸೂಚಿಸಿದರು.

ಜೆ.ಜೆ.ಎಂ. ಯೋಜನೆಯ ಅರ್ಥ್ ವರ್ಕಿಂಗ್ ಪರಿಶೀಲಿಸಿದರು. ಬಳಿಕ ಕೆಲ ಮನೆಗಳಿಗೆ ತೆರಳಿ ಜೆಜೆಎಂ ಯೋಜನೆಯಲ್ಲಿ ಅಳವಡಿಸಲಾಗಿರುವ ನಲ್ಲಿಯಲ್ಲಿ ಬರುವ ನೀರಿನ ತೀವ್ರತೆಯನ್ನು ಪರಿಶೀಲಿಸಿದರು. ಹಾಗೂ ಗ್ರಾಮಗಳಲ್ಲಿ ನೀರಿನ ಟ್ಯಾಂಕ್ ಗಳನ್ನು ಕಾಲ ಕಾಲಕ್ಕೆ ಸ್ವಚ್ಛಗೊಳಿಸಬೇಕು. ಟ್ಯಾಂಕ್ ಗಳನ್ನು ಸ್ವಚ್ಚ ಮಾಡಿದ ದಿನಾಂಕವನ್ನು ಕಡ್ಡಾಯವಾಗಿ ಗೋಡೆ ಮೇಲೆ ಬರೆಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯ ಪಾಲಕ ಅಭಿಯಂತರರಾದ ರಂಜಿತ್ ಕುಮಾರ್, ಸಹಾಯಕ ಕಾರ್ಯ ಪಾಲಕ ಅಭಿಯಂತರು ಹಾಗೂ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

22 mins ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

32 mins ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

42 mins ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

1 hour ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

1 hour ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

2 hours ago