ಮೈಸೂರು:
ವಿದ್ಯುತ್ ಸುರಕ್ಷತಾ ಸಪ್ತಾಹದ ( ಜೂನ್ 26ರಿಂದ ಜುಲೈ 2ರವರೆಗೆ) ಅಂಗವಾಗಿ ಕಡಕೊಳದಲ್ಲಿರುವ ಕೆ.ಇ.ಬಿ.ಇ.ಎ ತರಬೇತಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
“ಸೆಸ್ಕ್ ವ್ಯಾಪ್ತಿಯಲ್ಲಿ ವಿದ್ಯುತ್ ಅಪಘಾತಗಳ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, 2022-2023ನೇ ಸಾಲಿನಲ್ಲಿ 211 ವಿದ್ಯುತ್ ಅಪಘಾತಗಳು ಸಂಭವಿಸಿತ್ತು. 2023-24ರಲ್ಲಿ 138 ವಿದ್ಯುತ್ ಅಪಘಾತಗಳು ಮಾತ್ರ ಸಂಭವಿಸಿದ್ದು, ಒಟ್ಟಾರೆ ಅಪಘಾತಗಳ ಪ್ರಮಾಣದಲ್ಲಿ ಶೇ.35%ರಷ್ಟು ಕಡಿಮೆಯಾಗಿದೆ. ಪ್ರಾಣಾಪಾಯದ ಪ್ರಮಾಣ ಶೇ.70ರಷ್ಟು ಕಡಿಮೆ ಆಗಿದ್ದರೆ ಪ್ರಾಣಿಗಳ ಸಾವು ಶೇ.40ರಷ್ಟು ಕ್ಷೀಣೀಸಿದೆ,” ಎಂದರು.
“ವಿದ್ಯುತ್ ಸುರಕ್ಷತೆ ವಿಚಾರದಲ್ಲಿ ನಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕೆಂಬುದನ್ನು ನೆನಪಿಸಲು ಸುರಕ್ಷತಾ ಸಪ್ತಾಹ ಅತ್ಯಂತ ಮುಖ್ಯವಾಗಿದೆ. ಗ್ರಾಹಕರಿಗೆ ಗುಣಮಟ್ಟದ ನಿರಂತರ ವಿದ್ಯುತ್ ಪೂರೈಸುವ ಜತೆಗೆ ಸುರಕ್ಷತಾ ಕ್ರಮಗಳಿಗೆ ಒತ್ತು ನೀಡಬೇಕು. ಕಾರ್ಯ ನಿರ್ವಹಣೆ ವೇಳೆ ಸುರಕ್ಷತಾ ನಿಯಮ ಉಲ್ಲಂಘಿಸಿದ ಸಿಬ್ಬಂದಿಗೆ ದಂಡ ವಿಧಿಸುವ ಸಂಬoಧ ಇತ್ತೀಚಿನ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಸಿಬ್ಬಂದಿಯ ಸುರಕ್ಷತೆಯ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ,” ಎಂದು ಅವರು ತಿಳಿಸಿದರು.
ವಿದ್ಯುತ್ ಅವಘಡಗಳಿಗೆ ಪ್ರಮುಖ ಕಾರಣಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತಂತೆ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ಜತೆಗೆ ನಾಟಕ ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಪರ ಮುಖ್ಯ ಪರಿವೀಕ್ಷಕರಾದ ಎಚ್.ಎಸ್. ವೆಂಕಟೇಶ್, ಅಧೀಕ್ಷಕ ಅಭಿಯಂತರರಾದ ಸುನೀಲ್, ಉಪ ಮುಖ್ಯ ಪರಿವೀಕ್ಷಕರಾದ ಅಲ್ತಾಫ್ ಹುಸೇನ್, ಸಂದೀಪ್, ರಘುಕುಮಾರ್ ಸೇರಿದಂತೆ ವಿದ್ಯುತ್ ಪರಿವೀಕ್ಷಕ ವಲಯದ ಹಲವು ಅಧಿಕಾರಿಗಳು ಭಾಗವಹಿಸಿದ್ದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…