ಮೈಸೂರು

ವಿದ್ಯುತ್‌ ದೀಪಾಲಂಕಾರ ಎಂದರೆ ಸೆಸ್ಕ್‌ ಸಿಬ್ಬಂದಿಯ ನೆನೆಯುವರು: ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು: ರಾಜ್ಯದಲ್ಲಿ ಎಲ್ಲೇ ವಿದ್ಯುತ್‌ ದೀಪಾಲಂಕಾರ ಮಾಡಬೇಕು ಎಂದರೂ, ಸೆಸ್ಕ್ ಅವರನ್ನೇ ಕರೆಯಬೇಕು ಎನ್ನುವಂತಾಗಿದೆ. ಈ ಯಶಸ್ಸು ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಲ್ಲುತ್ತದೆ ಎಂದು ಶಾಸಕರೂ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಹೇಳಿದರು.

ಹೊಸವರ್ಷದ ಸಂದರ್ಭದಲ್ಲಿ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಸೆಸ್ಕ್‌ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

“ನಾವು ಮಾಡುವ ಕೆಲಸಗಳಿಂದ ಜನ ನಮ್ಮನ್ನು ಗುರುತಿಸಬೇಕು, ಈ ನಿಟ್ಟಿನಲ್ಲಿ ಪರಿಶ್ರಮ ಹಾಕೋಣ, ಶಾಶ್ವತವಾಗಿ ಉಳಿಯುವಂಥ ಕೆಲಸಗಳನ್ನು ಮಾಡೋಣ. ನಾವು ಮಾಡುವ ಕೆಲಸಗಳಿಂದ ಜನ ನಮ್ಮನ್ನು ಸ್ಮರಿಸುತ್ತಾರೆ. ನಮ್ಮ ಶ್ರಮಕ್ಕೆ ತಕ್ಕ ಫಲ ದೊರೆಯುವುದು ನಿಶ್ಚಿತ, ಅದಕ್ಕಾಗಿ ಕಾಯುವ ಮನಸ್ಥಿತಿ ಇರಬೇಕು. ಅದಕ್ಕೆ ಉದಾಹರಣೆ ಅಂದರೆ, ಎಲ್ಲೇ ವಿದ್ಯುತ್‌ ದೀಪಾಲಂಕಾರ ಮಾಡಿದರೂ, ಸೆಸ್ಕ್ ಅವರನ್ನೇ ಕರೆಯಬೇಕು ಎನ್ನುವಂತಾಗಿದೆ. ಈ ಯಶಸ್ಸು ನಿಗಮದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಲ್ಲುತ್ತದೆ,” ಎಂದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ. ಶೀಲಾ ಮಾತನಾಡಿ, “ಸೆಸ್ಕ್‌ ವತಿಯಿಂದ ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಲಾಗಿದೆ. ಸಂಸ್ಥೆಯ ಕೆಲಸವನ್ನು ಹೆಚ್ಚು ಶ್ರದ್ಧೆಯಿಂದ ಮಾಡಿ, ತ್ವರಿತವಾಗಿ ಸೇವೆ ಒದಗಿಸುವ ಗುರಿ ನಿಮ್ಮದಾಗಲಿ. ಹಿಂದಿನ ವರ್ಷದ ಕಹಿ ಘಟನೆಗಳನ್ನು ಮರೆತು, ಸಿಹಿ ಘಟನೆಗಳ ಪ್ರೇರಣೆಯೊಂದಿಗೆ ಮುನ್ನಡೆಯೋಣ,” ಎಂದರು.

ನಿಗಮದ ತಾಂತ್ರಿಕ ವಿಭಾಗದ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು ಮಾತನಾಡಿ, “ಹಿಂದಿನ ವರ್ಷ ಎಲ್ಲರೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ನಮ್ಮ‌ ಜವಾಬ್ದಾರಿಗಳನ್ನು ಅರಿತು, ತಂಡವಾಗಿ ಕೆಲಸ ಮಾಡೋಣ. ಶ್ರೇಯಸ್ಸು ನಮ್ಮದಾಗಲಿದೆ” ಎಂದರು.

ಇದೇ ಸಂದರ್ಭದಲ್ಲಿ ಸೆಸ್ಕ್ ಅಧಿಕಾರಿಗಳು, ನಿಗಮದ ವತಿಯಿಂದ ಮಾಡಿರುವ ಕೆಲಸಗಳು ಹಾಗೂ ಮುಂದಿನ ದಿನಗಳಲ್ಲಿ ಮಾಡಬೇಕಿರುವ ಕೆಲಸಗಳ ಬಗ್ಗೆ ಅನಿಸಿಕೆ ಹಂಚಿಕೊಂಡರು. ಸಭೆಯಲ್ಲಿ ಸೆಸ್ಕ್ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

4 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

4 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

4 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

4 hours ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

4 hours ago