CESCOM online services will be unavailable from July 25 to 27
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಜು.25 ರಿಂದ 27 ರವರೆಗೆ ಆನ್‌ಲೈನ್ ಸೇವೆಗಳು ಅಲಭ್ಯವಾಗಿರುತ್ತವೆ ಎಂದು ಸೆಸ್ಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ನಿಗದಿತ ದಿನಾಂಕಗಳಂದು ಸರ್ವರ್ ನಿರ್ವಹಣೆ ಇರುವುದರಿಂದ ಜು.25 ರಾತ್ರಿ 8.30 ರಿಂದ ಜು.27 ರಂದು ರಾತ್ರಿ 10 ಗಂಟೆಯವರೆಗೆ ಸೆಸ್ಕ್‌ನ ಆನ್‌ಲೈನ್ ಸೇವೆಗಳಾದ ಆನ್‌ಲೈನ್ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಅರ್ಜಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ, ನಗದು ಕೌಂಟರ್ ಹಾಗೂ ಇನ್ನಿತರೆ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.
ಸೆಸ್ಕ್ ವ್ಯಾಪ್ತಿಯ ವಿ.ವಿ. ಮೊಹಲ್ಲಾ, ಹೂಟಗಳ್ಳಿ, ಕುವೆಂಪುನಗರ, ರಾಮಕೃಷ್ಣನಗರ, ಕೇಂದ್ರೀಯ ಉಪವಿಭಾಗ, ಚಾಮುಂಡಿಪುರಂ, ಎನ್.ಆರ್. ಮೊಹಲ್ಲಾ, ಜ್ಯೋತಿನಗರ, ನಂಜನಗೂಡು, ಕೆ.ಆರ್.ನಗರ, ಹುಣಸೂರು, ಚಾಮರಾಜನಗರ, ಕೊಳ್ಳೇಗಾಲ, ಮಡಿಕೇರಿ, ಮಂಡ್ಯ, ಮಳವಳ್ಳಿ, ಹಾಸನ, ಚನ್ನರಾಯಪಟ್ಟಣ ಮತ್ತು ಅರಸಿಕೆರೆ ವ್ಯಾಪ್ತಿಯ ಗ್ರಾಹಕರಿಗೆ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸಬೇಕು. ಹೊರತು ವಿದ್ಯುತ್ ವ್ಯತ್ಯಯವಿರುವುದಿಲ್ಲ ಎಂದು ಸೆಸ್ಕ್ ಅಧಿಕಾರಿಗಳು ತಿಳಿಸಿದ್ದಾರೆ.
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…