ಮೈಸೂರು

ಜು.25 ರಿಂದ 27ರವರೆಗೆ ಸೆಸ್ಕ್‌ ಆನ್‌ಲೈನ್‌ ಸೇನೆ ಅಲಭ್ಯ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಜು.25 ರಿಂದ 27 ರವರೆಗೆ ಆನ್‌ಲೈನ್ ಸೇವೆಗಳು ಅಲಭ್ಯವಾಗಿರುತ್ತವೆ ಎಂದು ಸೆಸ್ಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ನಿಗದಿತ ದಿನಾಂಕಗಳಂದು ಸರ್ವರ್ ನಿರ್ವಹಣೆ ಇರುವುದರಿಂದ ಜು.25 ರಾತ್ರಿ 8.30 ರಿಂದ ಜು.27 ರಂದು ರಾತ್ರಿ 10 ಗಂಟೆಯವರೆಗೆ ಸೆಸ್ಕ್‌ನ ಆನ್‌ಲೈನ್ ಸೇವೆಗಳಾದ ಆನ್‌ಲೈನ್ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಅರ್ಜಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ, ನಗದು ಕೌಂಟರ್ ಹಾಗೂ ಇನ್ನಿತರೆ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

ಸೆಸ್ಕ್ ವ್ಯಾಪ್ತಿಯ ವಿ.ವಿ. ಮೊಹಲ್ಲಾ, ಹೂಟಗಳ್ಳಿ, ಕುವೆಂಪುನಗರ, ರಾಮಕೃಷ್ಣನಗರ, ಕೇಂದ್ರೀಯ ಉಪವಿಭಾಗ, ಚಾಮುಂಡಿಪುರಂ, ಎನ್.ಆರ್. ಮೊಹಲ್ಲಾ, ಜ್ಯೋತಿನಗರ, ನಂಜನಗೂಡು, ಕೆ.ಆರ್.ನಗರ, ಹುಣಸೂರು, ಚಾಮರಾಜನಗರ, ಕೊಳ್ಳೇಗಾಲ, ಮಡಿಕೇರಿ, ಮಂಡ್ಯ, ಮಳವಳ್ಳಿ, ಹಾಸನ, ಚನ್ನರಾಯಪಟ್ಟಣ ಮತ್ತು ಅರಸಿಕೆರೆ ವ್ಯಾಪ್ತಿಯ ಗ್ರಾಹಕರಿಗೆ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸಬೇಕು. ಹೊರತು ವಿದ್ಯುತ್ ವ್ಯತ್ಯಯವಿರುವುದಿಲ್ಲ ಎಂದು ಸೆಸ್ಕ್ ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

8 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

8 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

8 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

10 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

12 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

18 hours ago