ಮೈಸೂರು

ಬಿಜೆಪಿಯಿಂದ ಯತ್ನಾಳ್‌ ಉಚ್ಚಾಟನೆ| ಪಕ್ಷದ ಇತರರಿಗೆ ಎಚ್ಚರಿಕೆ ಗಂಟೆ: ಛಲವಾದಿ ನಾರಾಯಣ ಸ್ವಾಮಿ

ಮೈಸೂರು: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿರುವುದು ಪಕ್ಷದ ಇತರರಿಗೂ ಎಚ್ಚರಿಕೆಯ ಗಂಟೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಮಾರ್ಚ್.‌28) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ಕೂಡ ನಮ್ಮ ನಾಯಕರು. ನಾನು ಸಾಕಷ್ಟು ಬಾರಿ ಸ್ವಲ್ಪ ತಿದ್ದಿಕೊಳ್ಳಿ ನಿಮಗೆ ಉತ್ತಮ ಭವಿಷ್ಯವಿದೆ, ಉತ್ತಮ ನಾಯಕರಾಗುತ್ತೀರೆಂದು ಹೇಳಿದ್ದೆ. ಅಲ್ಲದೇ ಅವರಿಗೆ ನಮ್ಮ ಹೈಕಮಾಂಡ್ ತಪ್ಪು ತಿದ್ದಿಕೊಳ್ಳಲು ಅವಕಾಶ ನೀಡಿದ್ದರು. ಆದರೆ ಹೈಕಮಾಂಡ್‌ ನೋಟಿಸ್ ನೀಡಿದ್ದರೂ ಯತ್ನಾಳ್ ಉತ್ತರ ನೀಡಿಲ್ಲ. ಹೀಗಾಗಿ ಹೈಕಮಾಂಡ್ ಕ್ರಮ ತೆಗೆದುಕೊಂಡಿದೆ ಎಂದು ಹೇಳಿದರು.

ಇನ್ನು ಈಗಲೂ ಇನ್ನೂ ಶಿವರಾಂ ಹೆಬ್ಬಾರ್ ಸೇರಿದಂತೆ ಅನೇಕರು ಪಕ್ಷದ ವಿರುದ್ದ ಮಾತನಾಡುತ್ತಿದ್ದಾರೆ
ಮುಂದಿನ ಸರದಿ ಅವರದೇ ಇರಬಹುದು. ಆದರೆ ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದ್ದು, ಇಲ್ಲಿ ಯಾರರು ಹುಲಿ ಅಲ್ಲ, ಹುಲಿ ಎಂದರೆ ಪಕ್ಷದ ಹೈಕಮಾಂಡ್‌ ಮನೆಗೆ ಕಳುಹಿಸುತ್ತದೆ. ಹಾಗಾಗಿ ಯಾರೂ ಹೈಕಮಾಂಡ್ ನಿರ್ಧಾರ ವಿರೋಧಿಸಬಾರದು. ಯತ್ನಾಳ್ ಪರ ನಾವಿದ್ದೇವೆ ಎಂದು ಹೇಳಬಾರದು. ಹೊಂದಾಣಿಕೆ ರಾಜಕಾರಣಕ್ಕೆ ಹೈಕಮಾಂಡ್ ಬ್ರೇಕ್ ಹಾಕಲಿದೆ. ಜೊತೆಗೆ ಯತ್ನಾಳ್‌ ಅವರ ಉಚ್ಛಾಟನೆ ಪಕ್ಷದ ವಿರುದ್ಧ ನಡೆಯುವವರಿಗೆ ಇದು ಎಚ್ಚರಿಕೆ ಗಂಟೆಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಆ ಜೀ ಈ ಜೀ ಗಳಿಂದ ಯತ್ನಾಳ್ ರಾಜಕೀಯ ಭವಿಷ್ಯ ಹಾಳಾಯ್ತು ಎಂಬ ಕಾಂಗ್ರೆಸ್ ಟ್ವೀಟ್ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷಕ್ಕೆ ನಮ್ಮ ಬಿಜೆಪಿ ಬಗ್ಗೆ ಏನು ಹೇಳುವ ನೈತಿಕ ಹಕ್ಕಿಲ್ಲ. ಏಕೆಂದರೆ ಅವರ ತೂತುಗಳೇ ನೂರಾರಿದೆ. ಮೊದಲು ಅವರು ಅದನ್ನು ಮೊದಲು ಮುಚ್ಚಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

ಸತೀಶ್ ಜಾರಕಿಹೊಳಿ ಏನು ಪಕ್ಷದ ಒಡೆದು ಸಿಎಂ ಆಗ್ತಾರಾ?

ಈ ವೇಳೆ ಸತೀಶ್ ಜಾರಕಿಹೊಳಿ ಸಿಎಂ ಆಗಲು ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ ಎಂಬ ಜಿ.ಟಿ.ದೇವೇಗೌಡ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಯಾಕೆ ಭೇಟಿ ಮಾಡಿದ್ದಾರೆ ಗೊತ್ತಿಲ್ಲ. ಈಗಾಗಲೇ ಕಾಂಗ್ರೆಸ್‌ನಲ್ಲಿಯೇ 136 ಸೀಟುಗಳಿವೆ. ಅಂತಹದರಲ್ಲಿ ಅಲ್ಲಿ ಸಿಎಂ ಆಗಲು ಏನು ಕೇಳಲು ಸಾಧ್ಯ. ಸತೀಶ್ ಜಾರಕಿಹೊಳಿ ಅವರು ಏನು ಪಕ್ಷದ ಒಡೆದು ಸಿಎಂ ಆಗ್ತಾರಾ? ಎಂದು ಪ್ರಶ್ನಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

6 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

7 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

8 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

8 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

9 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

9 hours ago