ಮೈಸೂರು: ಚಾಮರಾಜ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ವಾಸು ಇಂದು ( ಮಾರ್ಚ್ 9 ) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಕಾರಣದಿಂದಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಳಿಸಲಾಗಿತ್ತು.
ಆದ್ರೆ ಬಹು ಅಂಗಾಂಗ ವೈಫಲ್ಯತೆಯಿಂದ ವಾಸು ಅವರು ಮೃತಪಟ್ಟರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇನ್ನು ಭಾನುವಾರ ಮಧ್ಯಾಹ್ನದವರೆಗೂ ಸಾರ್ವಜನಿಕ ಅಂತಿಮ ದರ್ಶನಕ್ಕೆ ಜಯಲಕ್ಷ್ಮಿಪುರಂನಲ್ಲಿರುವ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ. ಬಳಿಕ ಬನ್ನೂರು ರಸ್ತೆಯಲ್ಲಿರುವ ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವಾಸು ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ತಿಳಿಸಲಾಗಿದೆ.