Mysore
26
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ನಾಳೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ

chamundeshwari chamundi temple special pooja

ಮೈಸೂರು : ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಜು.17ರಂದು ನಡೆಯಲಿರುವ ಶ್ರೀ ಚಾಮುಂಡೇಶ್ವರಿ ವರ್ಧಂತಿಗೆ ಚಾಮುಂಡೇಶ್ವರಿ ಪ್ರಾಧಿಕಾರದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ ಅವರು ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಗುರುವಾರ ಮುಂಜಾನೆ 4 ಗಂಟೆಯಿಂದ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯ ಆರಂಭಗೊಳ್ಳಲಿವೆ. ಬಳಿಕ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಗುತ್ತದೆ. ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ವಿವಿಧೆಡೆ ಪ್ರಸಾದ ವಿನಿಯೋಗ
ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ನಗರದ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಸಲು ಜನರು ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಸಾದ ವಿನಿಯೋಗವೂ ನಡೆಯಲಿದೆ. ನಗರದ ಪ್ರಮುಖ ಬಡಾವಣೆಗಳು, ಬೆಟ್ಟದ ಪಾದ, ಆಟೋ ನಿಲ್ದಾಣಗಳು, ವೃತ್ತಗಳಲ್ಲಿ ಶಾಮಿಯಾನ ಹಾಕಿ ಚಾಮುಂಡೇಶ್ವರಿ ವರ್ಧಂತಿ ಆಚರಣೆಗೆ ಸಿದ್ಧತೆ ಮಾಡಿಕೊಂಡಿದ್ದು, ಸಾರ್ವಜನಿಕರಿಗೆ ಉಪಾಹಾರ ವಿತರಣೆ ಮಾಡಲಾಗುತ್ತದೆ. ಕೆಲವರು ಕಲ್ಯಾಣ ಮಂಟಪಗಳಲ್ಲಿ ಚಾಮುಂಡೇಶ್ವರಿ ದೇವತೆಗೆ ಪೂಜೆ ಸಲ್ಲಿಸಿ ಅನ್ನಸತಂರ್ಪಣೆ ಮಾಡುತ್ತಾರೆ ಇದಕ್ಕಾಗಿ ಆಮಂತ್ರಣ ಪತ್ರಿಕೆಯನ್ನೂ ಮುದ್ರಿಸಿದ್ದಾರೆ.

ಜು.18ರಂದು ಕಡೇ ಆಷಾಢ ಶುಕ್ರವಾರವಾಗಿದ್ದು, ಅಂದು ಚಾಮುಂಡೇಶ್ವರಿ ದೇವಾಲಯದಲ್ಲಿ ಬೆಳಗಿನ ಜಾವ 3.30ಕ್ಕೆ ಧಾರ್ಮಿಕ ಕಾರ್ಯ ಪ್ರಾರಂಭವಾಗುತ್ತವೆ ದೇವಸ್ಥಾನದ ಪ್ರಧಾನ ಅರ್ಚಕರಾದ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ನಡೆಯಲಿವೆ.

Tags:
error: Content is protected !!