Mysore
28
light rain

Social Media

ಬುಧವಾರ, 25 ಜೂನ್ 2025
Light
Dark

ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ : ಬೆಟ್ಟದಲ್ಲಿ ಮನೆಮಾಡಿದ ಸಂಭ್ರಮ

ಮೈಸೂರು : ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ನಡೆಯಲಿದ್ದು ಅದ್ಧೂರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇಂದು ತಾಯಿ ಚಾಮುಂಡೇಶ್ವರಿ ಹುಟ್ಟುಹಬ್ಬ. ಹೀಗಾಗಿ ನಾಡದೇವತೆ ನೆಲೆಸಿರುವ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ.

ಖುದ್ದು ರಾಜವಂಶಸ್ಥರೇ, ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾತ್ತಿರುವುದು ಸಂಭ್ರಮವನ್ನು ಇಮ್ಮಡಿಗೊಳಿಸಲಿದೆ.

ಈಗಾಗಲೇ ಆಷಾಢಮಾಸದ ಸಂಭ್ರಮ ಸಡಗರ ಚಾಮುಂಡಿಬೆಟ್ಟದಲ್ಲಿ ಜೋರಾಗಿದೆ. ಇದೀಗ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಗ್ಗೆ 10.30 ಗಂಟೆಗೆ ವರ್ಧಂತಿ ಮಹೋತ್ಸವದ ಉತ್ಸವ ಜರುಗಲಿದೆ. ಯದುವಂಶದ ಪ್ರಮೋದ ದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪತ್ನಿ ತ್ರಿಷಿಕಾ ಕುಮಾರಿ, ಪುತ್ರ ಆದ್ಯವೀರ ಸೇರಿ ಲಕ್ಷಾಂತರ ಜನರು ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ವರ್ಧಂತಿ ಹಿನ್ನಲೆ ಬೆಳಗ್ಗೆ 3:30ರಿಂದಲೇ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗಿವೆ. ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ ಸೇರಿ ಹಲವು ಸೇವೆಗಳನ್ನು ನೆರವೇರಿಸಲಾಗುತ್ತಿದೆ. ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ ಸೇವೆ ನಡೆಯಲಿದೆ. ಈ ಕಾರಣಕ್ಕೆ ಬೆಳಗ್ಗೆ 8 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಲ್ಲ. ಭಕ್ತರಿಗೆ ಬೆಳಗ್ಗೆ 8 ಗಂಟೆಯ ನಂತರ ದರ್ಶನಕ್ಕೆ ಅವಕಾಶ ನೀಡಿ ಮೈಸೂರಿನ ಚಾಮುಂಡೇಶ್ವರಿ ದೇವಾಲಯದ ಇಒ ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನ ಲಲಿತಮಹಲ್ ಮೈದಾನದಿಂದ 9 ಗಂಟೆಯಿಂದ ಬಸ್ ಸೇವೆ ಇರಲಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!