chamundeshwari chamundi temple
ಮೈಸೂರು: ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ವರ್ಧಂತಿಯ ಸಂಭ್ರಮ ಮನೆಮಾಡಿದ್ದು, ಬೆಟ್ಟದಲ್ಲಿ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.
ಮೈಸೂರು ರಾಜವಂಶಸ್ಥರ ಕುಲದೇವತೆಯೂ ಆಗಿರುವ ಚಾಮುಂಡೇಶ್ವರಿ ವರ್ಧಂತಿ ಉತ್ಸವದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿವೆ.
ದೇವಸ್ಥಾನದಲ್ಲಿ ಇಂದು ಮುಂಜಾನೆಯಿಂದಲೇ ಪೂಜಾ ಕೈಂಕರ್ಯಗಳು ನೆರವೇರಿದ್ದು, ದೇವಿಯ ಮೂರ್ತಿಗೆ ಅಭ್ಯಂಜನ ಸ್ನಾನ ಮಾಡಿಸಿದ ಬಳಿಕ ಅಲಂಕಾರಗಳೊಂದಿಗೆ ವಿಶೇಷ ಪೂಜೆ ನೆರವೇರಿಸಲಾಗಿದೆ.
ವರ್ಧಂತಿ ಮಹೋತ್ಸವದ ಅಂಗವಾಗಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಒಡೆಯರ್ ಅವರು ಚಾಮುಂಡಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಮಹಾಮಂಗಳಾರತಿ ಬಳಿಕ ಉತ್ಸವ ಮೂರ್ತಿಯನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಇರಿಸಿ, ದೇವಸ್ಥಾನದ ಆವರಣದಲ್ಲಿ ಪ್ರದಕ್ಷಿಣೆ ಹಾಕಲಾಯಿತು. ಮತ್ತೆ ದೇವಸ್ಥಾನದ ಮುಂಭಾಗದಲ್ಲಿ ಚಿನ್ನದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೆರವಣಿಗೆ ನಡೆಯಿತು.
ಅರಮನೆ ಪೊಲೀಸ್ ಬ್ಯಾಂಡ್ ಜೊತೆಗೆ ಮಂಗಳವಾದ್ಯ, ಛತ್ರಿ, ಚಾಮರಗಳೊಂದಿಗೆ ನಡೆದ ಮೆರವಣಿಗೆಯನ್ನು ಸಹಸ್ರಾರು ಭಕ್ತರು ಕಣ್ತುಂಬಿಕೊಂಡರು.
ವರ್ಧಂತಿಯ ಅಂಗವಾಗಿ ಇಂದು ಬೆಳಿಗ್ಗೆ 8 ಗಂಟೆಯಿಂದಲೇ ಕೆಎಸ್‌ಆರ್‌ಟಿಸಿ ಬಸ್ ಕಾರ್ಯಾಚರಣೆ ಆರಂಭವಾಗಿದೆ. ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕವೂ ಸಾವಿರಾರು ಭಕ್ತರು ತೆರಳುತ್ತಿದ್ದು, ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಇನ್ನು ಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…