ಮೈಸೂರು

ರಾಜಮನೆತನದ ಋಣ ತೀರಿಸಲಿಕ್ಕೆ ಚಾಮುಂಡೇಶ್ವರಿ ಒಂದು ಅವಕಾಶ ನೀಡಿದ್ದಾಳೆ : ಜಿ.ಟಿ.ದೇವೇಗೌಡ

ಮೈಸೂರು : ಮೈಸೂರು ಪ್ರಾಂತ್ಯಕ್ಕೆ ರಾಜಮನೆತನ ನೀಡಿರುವ ಕೊಡುಗೆಯ ಋಣ ತೀರಿಸಲಿಕ್ಕೆ ಚಾಮುಂಡೇಶ್ವರಿ ಒಂದು ಅವಕಾಶ ನೀಡಿದ್ದಾಳೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು.

ಜೆಡಿಎಸ್‌ ಹಾಗೂ ಬಿಜೆಪಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವತಂತ್ರ ಹೋರಾಟಕ್ಕೆ, ಕಾಂಗ್ರೆಸ್‌ ಪಕ್ಷದ ಪ್ರತಿಷ್ಠಾಪನೆಗೆ, ಬಿಜೆಪಿ ಪಕ್ಷಕ್ಕೆ ನೆಲೆ ನೀಡರುವಂತ ಪ್ರಾಂತ್ಯ ನಮ್ಮ ಮೈಸೂರು.  ಇಂಥ ಸ್ಥಳದಿಂದ ನಮ್ಮ ಯುವರಾಜರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚುನಾವಣೆಗೆ ನಿಂತಿದ್ದಾರೆ. ಯುವರಾಜರು ನನ್ನ ಮೂಲಕ ಚಾಮುಂಡೇಶ್ವರಿ ಕ್ಷೇತ್ರದ ಮತದಾರರ ಬಳಿಗೆ ಬಂದಿದ್ದಾರೆ ಎಂದರು.

ಯಾವುದೇ ಆಸೆ ಆಮಿಶಗಳು ಬರಲಿ, ರಾಜಮನೆತನ ನೀಡಿರುವ ಕೊಡುಗೆಯನ್ನು ನಾವು ತೀರಿಸಲಿಕ್ಕೆ ಸಾಧ್ಯವಿಲ್ಲ.  ನಮ್ಮ ತಾತ, ತಂದೆ ಹಾಗೂ ನಾವೆಲ್ಲರು ಅವರ ಕೊಡುಗೆಗಳನ್ನು ಅನುಭವಿಸಿದ್ದೇವೆ. ಹೀಗಾಗಿ ಯುವರಾಜರನ್ನು ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಅವರ ಋಣ ತೀರಿಸುವ ಅವಕಾಶ ಬಂದಿದೆ ಎಂದರು.

ಚುನಾವಣೆಯಲ್ಲಿ ವಿಜಯ ಸಾಧಿಸಿದರೆ ಹಿಂದೆ ಯಾವುದೇ ಸಂಸದ, ಶಾಸಕ, ಮಂತ್ರಿಗಳು ಮಾಡ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಓಟು ಯುವರಾಜರಿಗೆ, ಜೆಡಿಎಸ್‌ ಓಟು ಬಿಜೆಪಿಗೆ, ಮಂಡ್ಯದಲ್ಲಿ ನಮ್ಮ ಓಟು ಜೆಡಿಎಸ್‌ಗೆ, ಚಾಮರಾಜನಗರದಲ್ಲಿ ನಮ್ಮ ಓಟು ಬಿಜೆಪಿಗೆ ಎಂಬುದನ್ನು ಮನಸ್ಸಿನಲ್ಲಿ ನಿಶ್ಚಯ ಮಾಡಿಕೊಂಡು, ಗಟ್ಟಿ ನಿರ್ಧಾರ ಮಾಡಿಕೊಳ್ಳಿ ಎಂದು ಮೈಸೂರು-ಕೊಡಗು ಕ್ಷೇತ್ರದ ಮತದಾರರಿಗೆ ಮನವಿ ಮಾಡಿದರು.

 

andolanait

Recent Posts

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

11 mins ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

2 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

6 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

6 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

6 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

6 hours ago