ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ ಕಾಣಿಸಿಕೊಂಡಿದ್ದ ಬೆಂಕಿ, ಮಧ್ಯರಾತ್ರಿಯಾದರೂ ಆರಿರಲಿಲ್ಲ. ಸದ್ಯ ಇದೀಗ ಬೆಂಕಿಯ ಜ್ವಾಲೆ ನಿಯಂತ್ರಣಕ್ಕೆ ಬಂದಿದೆ.
ಬಂಡೀಪಾಳ್ಯ, ಉತ್ತನಹಳ್ಳಿ ಭಾಗದ ಕಾಡಿನಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಇದೀಗ ಹರಸಾಹಸಪಟ್ಟು ಬೆಂಕಿಯನ್ನು ಸಂಪೂರ್ಣ ನಿಯಂತ್ರಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಘಟನೆ ಸಂಬಂಧ ಕಿಡಿಗೇಡಿಗಳು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿಯು ವ್ಯಾಪಕವಾಗಿ ಹರಡಿದ್ದು, ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ.





