ಮೈಸೂರು

ಯುವ ಸಮುದಾಯದಲ್ಲಿ ಇಂದು ಗೆಲ್ಲುವ ದಾವಂತ ಹೆಚ್ಚಾಗಿದೆ : ರಂಗಕರ್ಮಿ ಚಂದ್ರು ಮಂಡ್ಯ

ಮೈಸೂರು : ಯುವ ಸಮುದಾಯದಲ್ಲಿ ಇಂದು ಗೆಲ್ಲುವ ದಾವಂತ ಹೆಚ್ಚಾಗಿದೆ. ಗೆಲ್ಲುವ ಹಂತದಲ್ಲಿನ ಪ್ರಕ್ರಿಯೆ ಮತ್ತು ಸೋಲನ್ನು ಆನಂದಿಸುವ ಮನೋಭಾವವನ್ನೇ ತೊರೆದು ಬಿಟ್ಟಿದ್ದಾರೆ ಎಂದು ಅದಮ್ಯ ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಹಾಗೂ ರಂಗಕರ್ಮಿ ಚಂದ್ರು ಮಂಡ್ಯ ಅಭಿಪ್ರಾಯಪಟ್ಟರು.
ಮೈಸೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ ಹಾಗೂ ಜೆ ಎಸ್ ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ( ಸ್ವಾಯತ್ತ) ವತಿಯಿಂದ ಮೈಸೂರು ಪಕ್ಕದ ಬಸವನಹಳ್ಳಿ (ಗದ್ದಿಗೆ) ಗ್ರಾಮದಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಯುವಜನರಲ್ಲಿ ಗೆಲುವು ಒಂದೇ ಮಾನದಂಡ ಎಂದು ಕೆಲವು ಪೋಷಕರು ಬಯಸುತ್ತಿದ್ದಾರೆ. ಗೆಲುವು ಕ್ಷಣಿಕವಾದ ಮನೋಲ್ಲಾಸ ಮತ್ತು ಸಂತೋಷವನ್ನು ನೀಡುತ್ತದೆ, ಅದರೆ ಗೆಲ್ಲುವ ಹಂತದಲ್ಲಿ ಸಾವಿರಾರು ಪ್ರಕ್ರಿಯೆಯನ್ನು ಆನಂದಿಸುವುದನ್ನು ಯುವ ಜನತೆ ಮತ್ತು ಪೋಷಕರು ಮರೆತಿದ್ದಾರೆ ಎಂದರು.
ಮಕ್ಕಳಿಗೆ ಕೂಡು ಕುಟುಂಬದ ಪರಿಕಲ್ಪನೆ ಮೂಡುವಂತೆ ಪೋಷಕರು ನಡೆದುಕೊಳ್ಳಬೇಕು. ಗುರು ಹಿರಿಯರಲ್ಲಿ ಭಯ, ಭಕ್ತಿ ಮತ್ತು ವಿಧೇಯತೆಯಿಂದ ಇರಬೇಕೆಂದು ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ರೂಡಿ ಮಾಡಬೇಕು ಎಂದರು.
ಯುವ ಸಮುದಾಯ ಸಾಧ್ಯವಾದಷ್ಟು ಹೃದಯ ವೈಶಾಲ್ಯತೆ ಹೊಂದುವ ಕಡೆ ಗಮನಹರಿಸಬೇಕು. ತೀರಾ ವೈಯಕ್ತಿಕ ಮತ್ತು ಕೌಟುಂಬಿಕ ನೆಲೆಯನ್ನು ಮೀರಿ ಸಾಮಾಜಿಕ ನೆಲೆಯಲ್ಲಿ ಬದುಕುವುದನ್ನು ಕಲಿಯಬೇಕು. ಜಾತಿ, ಧರ್ಮಗಳನ್ನು ಮೀರಿ ವಿಶ್ವ ಕವಿ ಕುವೆಂಪುರವರ ಆಶಯದಂತೆ ವಿಶ್ವ ಮಾನವರಾಗುವ ಕಡೆ ಸಾಗಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಸೇವಾ ಯೋಜನೆಯಿಂದ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಯುವ ಸಮುದಾಯದ ಪಾತ್ರ ಅತಿ ಮುಖ್ಯವಾದದ್ದು. ನಾಡಿನ ಕಟ್ಟ  ಕಡೆಯ ಗ್ರಾಮವನ್ನು ಕೂಡ ನಗರದಷ್ಟೇ ಮುಖ್ಯವಾಗಿ ಮೇಲ್ಪಂಕ್ತಿ ಗೆ ತರಲು ಶ್ರಮಿಸಬೇಕು, ಹೆಣ್ಣು ಮಕ್ಕಳು ಪುರುಷನಷ್ಟೇ ಸಮರ್ಥವಾಗಿ ಬದುಕು ಕಟ್ಟಿಕೊಳ್ಳಲು ಸಾದ್ಯವಿದೆ ಎಂದು ಗ್ರಾಮಿಣ ಪ್ರದೇಶದ ಹೆಣ್ಣು ಮಕ್ಕಳಿಗೆ ಅರಿವು ಮೂಡಿಸಬೇಕು ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ರಂಗಕರ್ಮಿ ಚಂದ್ರು ಮಂಡ್ಯ ಸಲಹೆ ನೀಡಿದರು.
ಜೆ ಎಸ್ ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ. ಬಿ. ವಿ. ಸಾಂಬಶಿವಯ್ಯ ಅಧ್ಯಕ್ಷತೆ ವಹಿಸಿ ಗ್ರಾಮೀಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮುಂದಿನ ದಿನಗಳಲ್ಲಿ ಜೆ ಎಸ್ ಎಸ್ ಸಂಸ್ಥೆ ಇನ್ನೂ ಹೆಚ್ಚಿನ ಸಹಕಾರ ನೀಡಲಿದೆ ಎಂದರು.
ಮಹಾತ್ಮ ಗಾಂಧೀಜಿಯವರ ಆಸೆಯಂತೆ ವಿದ್ಯಾರ್ಥಿಗಳು ಪರಸ್ಪರ ಪ್ರೀತಿ, ವಿಶ್ವಾಸ ಗೌರವದಿಂದ ಕಾಣಬೇಕು ಮತ್ತು ಗ್ರಾಮೀಣ ಪರಿಸರ ಅರಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಸೂಕ್ತ ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಚಲನಚಿತ್ರ ನಿರ್ದೇಶಕ ಎನ್. ತೇಜಸ್ವಿ, ಅಂತಾರಾಷ್ಟ್ರೀಯ ಜನಪದ ಕಲಾವಿದ ಅಮ್ಮ ರಾಮಚಂದ್ರ, ಜೆ ಎಸ್ ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ಪ್ರತಿಭಾ, ಚಲನಚಿತ್ರ ಕಲಾವಿದ ಎನ್. ಸ್ವಾಮಿ, ಬಸವನಹಳ್ಳಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಸವಿತಾ, ಗ್ರಾಮಸ್ಥರಾದ ಎನ್. ಕುಂಟೇಗೌಡ, ಸ್ವಾಮಿಗೌಡ ಉಪಸ್ಥಿತರಿದ್ದರು
ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಇನ್ಮುಂದೆ ಕಬ್ಬನ್‌ ಪಾರ್ಕ್‌ನಲ್ಲಿ ಗುಂಪು ಚಟುವಟಿಕೆಗೆ ಅನುಮತಿ ಪಡೆಯುವುದು ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್‌ ಆದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…

46 seconds ago

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ವೈಭವ್‌ ಸೂರ್ಯವಂಶಿ

13 ವರ್ಷದ ವೈಭವ್‌ ಸೂರ್ಯವಂಶಿ ಐಪಿಎಲ್‌ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…

6 mins ago

ಕುವೈತ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ

ಕುವೈತ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್‌ ಮಿಶಾಲ್‌…

12 mins ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸಮನ್ಸ್‌ ನೀಡಿದ ರಾಯ್‌ ಬರೇಲಿ ನ್ಯಾಯಾಲಯ

ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…

31 mins ago

ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚು: ಮಕ್ಕಳನ್ನು ಕಾಡುತ್ತಿರುವ ಕಾಲು ಬಾಯಿ ರೋಗ

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…

41 mins ago

ವಿವಾದದ ನಡುವೆಯೂ ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳದನಲ್ಲಿ ಬಾಡೂಟ ವಿತರಣೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…

53 mins ago