ಮೈಸೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಯಂ ಘೋಷಿಸಿಕೊಂಡಿದ್ದಾರೆ.
ನಗರದ ಮಂಡಕಹಳ್ಳಿಯಲ್ಲಿ ಇಂದು(ಅಕ್ಟೋಬರ್.13) ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ವಲ್ಪ ಮಟ್ಟಿಗೆ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿ ಸೋಲಬೇಕಾಯಿತು. ಆದರೆ ಈಗ ಪಕ್ಷವನ್ನು ನಾವು ಬಲಪಡಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಬಳಿಕ ಚನ್ನಪಟ್ಟಣ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸುತ್ತಿದ್ದೇನೆ ಎಂದರು.
ಈ ವೇಳೆಯಲ್ಲಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿಯಾಗಲಿದ್ದೇನೆ. ನನ್ನ ವಿರುದ್ಧ ಎನ್.ಡಿ.ಎ.ಅಭ್ಯರ್ಥಿ ಚುನಾವಣೆಗೆ ಸ್ಪರ್ಧಿಸುತ್ತಾರೋ ಅಥವಾ ಇನ್ಯಾರು ಸ್ಪರ್ಧಿಸುತ್ತಾರೋ ನನಗೆ ತಿಳಿಯದು. ಹೀಗಾಗಿ ನಾನು ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ನನ್ನ ಹೆಸರಿನಲ್ಲೇ ನಾನು ಮತ ಕೇಳುತ್ತೇನೆ ಎಂದು ಹೇಳಿದರು.
ಬೆಂಗಳೂರು: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂಬ ಆರೋಪವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ…
ಬೆಂಗಳೂರು: ರಾಜ್ಯದಲ್ಲಿ ಬಹುನಿರೀಕ್ಷಿತ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಿದ್ಧತೆಗಳು ನಡೆಯುತ್ತಿವೆ. ಮುಂದಿನ ಡಿಸೆಂಬರ್ ಅಂತ್ಯ ಅಥವಾ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕೆಆರ್‌ಎಸ್ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ 9,457 ಕ್ಯುಸೆಕ್…
ಮೈಸೂರು ಜೆಪಿ ನಗರ ರಿಂಗ್ ರಸ್ತೆಯ ರೈಲ್ವೆ ಅಂಡರ್‌ಬ್ರಿಡ್ಜ್ ಬಳಿಯ ಶ್ರೀನಗರ ಬಡಾವಣೆಗೆ ಹೋಗುವ ರಸ್ತೆಯು ರೈಲ್ವೆ ಕ್ರಾಸಿಂಗ್ ದಾಟಿ…
ಪಡಿತರ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವವರು ಇ- ಕೆವೈಸಿ ಮಾಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದ್ದು, ಇದಕ್ಕೆ ಆಧಾರ್…
ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಉಂಟು ಮಾಡಿರುವ ಸ್ಟಿಂಗ್ ಆಪರೇಷನ್ ( ಮಾರುವೇಷದ ಕಾರ್ಯಾಚರಣೆ) ಬಗ್ಗೆ ಕೇಂದ್ರ ಸಚಿವ…