Mysore
15
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಪ್ರತಿ ಪಂಚಾಯ್ತಿಯಲ್ಲೂ ಕಾಲಕಾಲಕ್ಕೆ ನೀರು ಪರೀಕ್ಷಿಸಿ: ಗಾಯಿತ್ರಿ

ಮೈಸೂರು:  ಗ್ರಾಮೀಣ ಪ್ರದೇಶದಲ್ಲಿ ಕಾಲಕಾಲಕ್ಕೆ ನೀರಿನ ಮಾದರಿಗಳನ್ನು ಪರೀಕ್ಷಿಸಿ ಸಾರ್ವಜನಿಕರಿಗೆ ಶುದ್ಧ-ಸುರಕ್ಷಿತ ನೀರನ್ನು ಪೂರೈಸುವುದು ಗ್ರಾಮ ಪಂಚಾಯಿತಿಯ ಜವಾಬ್ದಾರಿಯಾಗಿದೆ. ಆಗಾಗಿ ನೀರಿನ ಮೂಲಗಳನ್ನು ಪರೀಕ್ಷಿಸಿ OHT  ಮತ್ತು ನೀರಿನ ತೊಂಬೆಗಳನ್ನು ಕಾಲಕಾಲಕ್ಕೆ ಶುಚಿಗೊಳಿಸಿ ನೀರು ಕಲುಷಿತಗೊಳ್ಳದಂತೆ ಎಚ್ಚರ ವಹಿಸಿ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ. ಕೆ.ಎಂ ಗಾಯಿತ್ರಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳಿಗೆ ಸೂಚಿಸಿದರು.

ಮಂಗಳವಾರ ಜಿಲ್ಲಾ ಪಂಚಾಯಿತ್‌ ಸಭಾಂಗಣದಲ್ಲಿನಡೆದ ಜಿಲ್ಲೆಯ ಎಲ್ಲಾ ತಾಲೂಕುಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ  Field Test Kit (FTK) ಮೂಲಕ ನೀರಿನ ಗುಣಮಟ್ಟವನ್ನು ಪರೀಕ್ಷಿಸುವ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೀರಿನ ಮಾದರಿಗಳನ್ನು ಪರೀಕ್ಷಿಸಿದ ವರದಿಯನ್ನು WQMIS ಪೋರ್ಟಲ್ ನಲ್ಲಿ ಅಪಲೋಡ್‌ ಮಾಡಬೇಕು ಹಾಗೂ ಯಾವುದೇ ಅನಾಹುತ ಸಂಭವಿಸದಂತೆ ಎಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಸರಬರಾಜು  ಮಾಡಿ ಎಂದರು.

ಜೊತೆಗೆ WQMS ಟಾಸ್ಕ್ ಫೋರ್ಸ್ ಸಮಿತಿಯ ಜವಾಬ್ದಾರಿ ಮತ್ತು ಕಾರ್ಯವೈಖರಿಯ ಕುರಿತು ಸಲಹೆ ಸೂಚನೆಗಳನ್ನು ನೀಡಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ  ರಂಜಿತ್ ಕುಮಾರ್ ಎ. ಎಸ್ ಮಾತನಾಡಿ,  FTK Kit ಮತ್ತು H2S ಪರೀಕ್ಷೆಗಳನ್ನು ಬಳಸಿಕೊಂಡು ಗ್ರಾಮಗಳ ಹಂತದಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ತಡೆಯಲು ಮುಂಜಾಗ್ರತಾ ಕ್ರಮಗಳ ಕುರಿತು ವಿವರಿಸಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಅಭಿವೃದ್ಧಿ) ಡಾ. ಕೃಷ್ಣರಾಜು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರಾದ ರಂಜಿತ್ ಕುಮಾರ್ , ಜಿಪಂ ಉಪಕಾರ್ಯದರ್ಶ (ಆಡಳಿತ) ಸವಿತಾ, ಶ್ರೀಮತಿ ಮೇಘಲ, ಯೋಜನಾ ನಿರ್ದೇಶಕರು, ಶ್ರೀ ರುದ್ರೇಶ್, ಉಪ ನಿರ್ದೇಶಕರು ಹಾಗೂ ಎಲ್ಲಾ ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!