ಮೈಸೂರು : ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ.
ಸಹಾಯಕ ಲೈನ್‌ಮ್ಯಾನ್ ಸಂತೋಷ್(26) ಮೃತ ರ್ದುದೈವಿ. ಟ್ರಾನ್ಸ್ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಹರಿದು ಈ ಅವಘಡ ನಡೆದಿದೆ. ಇನ್ನು ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಮೃತ ಸಂತೋಷ್ ಪೋಷಕರು, ಸ್ನೇಹಿತರು ಆರೋಪಿಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಎಸಿಪಿ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.