ಮೈಸೂರು

ಎಚ್.ಡಿ.ಕೋಟೆ ಠಾಣೆ ಪೊಲೀಸ್‌ ಕಾನ್ಸ್‌ಟೇಬಲ್ ಸೈಯದ್‌ ಕಬೀರುದ್ದೀನ್‌ರಿಗೆ ಒಲಿದ ಮುಖ್ಯಮಂತ್ರಿ ಪದಕ

ಮೈಸೂರು: ಬೆಂಗಳೂರಿನ ಕೋರಮಂಗಲದಲ್ಲಿ ಕೆಎಸ್‌ಆರ್‌ಪಿ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್‌ ಧ್ವಜ ದಿನಾಚರಣೆಯಲ್ಲಿ ಎಚ್.ಡಿ.ಕೋಟೆ ಪೊಲೀಸ್‌ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್‌ ಸೈಯದ್ ಕಬೀರುದ್ದೀನ್ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು.

ಮೂಲತಃ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಮರದೂರು ಗ್ರಾಮದ ಸೈಯದ್ ಗಯಾಸುದ್ದೀನ್ ಮತ್ತು ಆಸೀಯಾಭಿ ರವರ ಮಗನಾದ ಸೈಯದ್ ಕಬೀರುದ್ದೀನ್ 2009ನೇ ಸಾಲಿನಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ನೇಮಕಗೊಂಡಿದ್ದು, ಹುಣಸೂರು ಪಟ್ಟಣ, ಪಿರಿಯಾಪಟ್ಟಣ, ಸರಗೂರು ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಸದ್ಯ ಈಗ ಹೆಚ್.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸೈಯರ್ ಕಬೀರುದ್ದೀನ್‌ ಅವರು ಪೊಲೀಸ್ ಇಲಾಖೆಯಲ್ಲಿ ಉತ್ತಮ ತನಿಖಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಅಪರಾಧ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಹಾಗೂ ಪತ್ತೆ ಹಚ್ಚುವಲ್ಲಿ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ. ೨೦೨೩ನೇ ಸಾಲಿನಲ್ಲಿ ಇವರು ತೋರಿದ ಅಸಾಧಾರಣ ನೈಪುಣ್ಯತೆ, ಪ್ರಾಮಾಣಿಕತೆ ಹಾಗೂ ದಕ್ಷತೆಗಾಗಿ ೨೦೨೩ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಅರ್ಹರಾಗಿದ್ದಾರೆ.

ಇವರು 2023ನೇ ಸಾಲಿನಲ್ಲಿ ಸಾಮಾನ್ಯ ಕಳವು ಮತ್ತು ಮನೆ ಕಳವು ಹಾಗೂ ಕೊಲೆ ಪ್ರಕರಣಗಳಿಗೆ ಸಂಬಂಧಪಟ್ಟ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತನಿಖಾಧಿಕಾರಿಗಳಿಗೆ ಸಹಕರಿಸಿದ್ದಾರೆ.

ಇವರ ಸಾಧನೆಗೆ ಹುಣಸೂರು ವಿಭಾಗ ಡಿವೈಎಸ್ಪಿ ಗೋಪಾಲಕೃಷ್ಣ, ಎಚ್.ಡಿ ಕೋಟೆ ಪಟ್ಟಣ ಠಾಣೆ ಇನ್ಸ್‌ಪೆಕ್ಟರ್ ಗಂಗಾಧರ್ ಈಚೆಗೆ ವರ್ಗಾವಣೆಗೊಂಡ ಶಬ್ಬೀರ್ ಹುಸೇನ್, ಸಬ್ ಇನ್ಸ್ಪೆಕ್ಟರ್ ಗಳಾದ ಚಿಕ್ಕನಾಯಕ, ಸುರೇಶ್ ನಾಯಕ, ಗೌರಿಶಂಕರ್, ಸುಬ್ರಮಣ್ಯ ಹಾಗೂ ಸಿಬ್ಬಂದಿ ಕುಟುಂಬದವರು‌, ಸ್ನೇಹಿತರು ಹಾಗೂ ಹಿತೈಷಿಗಳು ಶುಭ ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

2 hours ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

2 hours ago

ಕ್ರಿಸ್‌ಮಸ್ ಹಬ್ಬಕ್ಕೆ ಅರಮನೆ ನಗರಿ ಸಜ್ಜು

ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…

2 hours ago

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…

2 hours ago

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

14 hours ago