ಎಚ್.ಡಿ.ಕೋಟೆ: ಯುಗಾದಿ ಹಬ್ಬದ ಮಾರನೇಯ ದಿನವಾದ ಇಂದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಇಟ್ನಾ ಗ್ರಾಮದಲ್ಲಿ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಚಿಕ್ಕದೇವಮ್ಮನವರ ಬೆಟ್ಟದಿಂದ ಅಮ್ಮನವರನ್ನು ತಂದು ಹಾಲುಗಡುವಿನ ಜಪ್ಪದಕಟ್ಟೆಯಲ್ಲಿ ಪೂಜಿಸಲಾಯಿತು.
ಬಳಿಕ ಸಂಜೆಯ ವೇಳೆಗೆ ಅಮ್ಮನವರನ್ನು ಹಾಲುಗಡುವಿನಿಂದ ಇಟ್ನಾ ಗ್ರಾಮಕ್ಕೆ ತಂದು ಮಠದ ಹೊಲದ ಮಂಟಪದಲ್ಲಿ ಪೂಜಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಅಮ್ಮನವವರನ್ನು ಕಣ್ತುಂಬಿಕೊಳ್ಳಲು ಇಟ್ನಾ ಗ್ರಾಮಕ್ಕೆ ಜನಸಾಗರವೇ ಹರಿದು ಬರುತ್ತಿದೆ.
ಇಂದು ಇಟ್ನಾ ಗ್ರಾಮಕ್ಕೆ ಬರುವ ಸಾರ್ವಜನಿಕರಿಗೆ ಸಂಜೆ 4 ಗಂಟೆಯವರೆಗೂ ಅನ್ನದಾನ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇಂದು ಸಂಜೆ ಗ್ರಾಮದಲ್ಲಿ ಸಾಮಾಜಿಕ ನಾಟಕ ಏರ್ಪಡಿಸಲಾಗಿದ್ದು, ನಾಳೆ ಅಮ್ಮನವರನ್ನು ಚಿಕ್ಕದೇವಮ್ಮ ಬೆಟ್ಟಕ್ಕೆ ತರಲಾಗುತ್ತದೆ.
ಬೆಂಗಳೂರು : ಹಾಸನ ಕೊಡಗು ಮತ್ತು ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆಗಳಿಂದ ಸಂಭವಿಸುತ್ತಿರುವ ಜೀವಹಾನಿ, ಬೆಳೆ ಹಾನಿ ತಡೆಯಲು ಭದ್ರಾ ಅಭಯಾರಣ್ಯದಲ್ಲಿ…
ಕೆ.ಎಂ.ದೊಡ್ಡಿ : ತಾಲೂಕಿನ ಕೆರೆಗಳ ಸಮಗ್ರ ಅಭಿವೃದ್ಧಿ ಮಾಡಿ, ನೀರು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ…
ಮಂಡ್ಯ : ಜಿಲ್ಲೆಯಲ್ಲಿ ಜಲ್-ಜೀವನ್ ಮಿಷನ್ ಯೋಜನೆಯಡಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗಳಲ್ಲಿ ಭಾರಿ ಭ್ರಷ್ಟಾಚಾರವೆಸಗಲಾಗುತ್ತಿದ್ದು, ಸಂಬಂಧಿತ…
ಹನೂರು: ಪಟ್ಟಣದಲ್ಲಿ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ನಿರ್ಮಾಣ ಮಾಡಿರುವ ಇಂದಿರಾ ಕ್ಯಾಂಟೀನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ…
ಬೆಂಗಳೂರು : ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಪ್ರವೇಶವು ಈಗ ನೀಟ್ ವ್ಯಾಪ್ತಿಗೆ ಬರಲಿದೆ. ಇದು ಪ್ರಮಾಣೀಕೃತ ವೈದ್ಯಕೀಯ ಶಿಕ್ಷಣದತ್ತ ರಾಷ್ಟ್ರೀಯ ನಡೆಗೆ…
ಪಿರಿಯಾಪಟ್ಟಣ: ಕಳೆದ ಮೂರು ವರ್ಷಗಳಿಂದ ತಾಲೂಕು ಆಡಳಿತದ ಮುಂಭಾಗ ತಾಲ್ಲೂಕಿನ ಭೂ ಸಮಸ್ಯೆ ಸೇರಿದಂತೆ ಇತರೆ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ…