ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಇಂದು ಚಿಕ್ಕಜಾತ್ರೆಯು ವಿಜೃಂಭಣೆಯಿಂದ ನೆರವೇರಿತು.
ಮೊದಲಿಗೆ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು, ರಥಕ್ಕೆ ಪೂಜೆ ಸಲ್ಲಿಸಿ, ಹಗ್ಗ ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಬೆಳಿಗ್ಗೆ 10.45ರಿಂದ 11.30ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಾವಿರಾರು ಮಂದಿ ಸಾರ್ವಜನಿಕರ ಹರ್ಘೋದ್ಘಾರದ ನಡುವೆ ಚಿಕ್ಕಜಾತ್ರೆ ನೆರವೇರಿತು.
ಇಂದು ಮುಂಜಾನೆಯೇ ಚಿನ್ನಾಭರಣ ಹಾಗೂ ಬಣ್ಣ ಬಣ್ಣದ ಹೂಗಳಿಂದ ಶ್ರೀಕಂಠೇಶ್ವರ ಸ್ವಾಮಿ ಸೇರಿದಂತೆ ಪಾರ್ವತಿ ಅಮ್ಮನವರು ಹಾಗೂ ಗಣೇಶ ಮತ್ತು ಚಂಡಿಕೇಶ್ವರ ಸ್ವಾಮಿಯವರ ಉತ್ಸವ ಮೂರ್ತಿಗಳನ್ನು ದೇವಾಲಯದಿಂದ ಹೊರಗೆ ತಂದು ಹೊರಗಿನ ಪ್ರಾಂಗಣದಲ್ಲಿರಿಸಿ ಪೂಜೆ ಸಲ್ಲಿಸಲಾಯಿತು. ಬಳಿಕ ದೇವಾಲಯದ ಸುತ್ತಲೂ ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಲಾಯಿತು. ಆ ಬಳಿಕ ಸಾವಿರಾರು ಮಂದಿ ಸಾರ್ವಜನಿಕರ ಸಮ್ಮುಖದಲ್ಲಿ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ರಥೋತ್ಸವ ನೋಡಲು ಆಗಮಿಸಿದ್ದ ಸಾವಿರಾರು ಮಂದಿ, ರಥಗಳಿಗೆ ಹಣ್ಣು ಜವನ ಎಸೆದು ತಮ್ಮ ಹರಕೆ ತೀರಿಸಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…