ಭಾರತೀನಗರ: ಇಲ್ಲಿಗೆ ಸಮೀಪದ ಚಿಕ್ಕರಸಿನಕೆರೆ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಒಂಟಿ ಸಲಗವೊಂದು ಶನಿವಾರ ಪ್ರತ್ಯಕ್ಷವಾಗಿದೆ.
ರೈತರು ತಮ್ಮ ಜಮೀನಿಗೆ ಹೋದಾಗ ಸಲಗ ಕಾಣಿಸಿಕೊಂಡಿದ್ದು, ಇದರಿಂದ ಜನರು ಭಯಗೊಂಡು ತಕ್ಷಣ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ.
ರೈತ ಶೇಖರ್, ಶಿವಲಿಂಗೇಗೌಡ ಎಂಬವರು ಪೊಲೀಸ್ ಠಾಣೆಗೆ ಮತ್ತು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಆನೆಯು ಗ್ರಾಮಕ್ಕೆ ಪ್ರವೇಶಿಸದಂತೆ ಕ್ರಮ ಕೈಗೊಂಡಿದ್ದಾರೆ.
ಮಳವಳ್ಳಿ ಭಾಗದ ಅರಣ್ಯ ಪ್ರದೇಶದಿಂದ ಈ ಸಲಗ ಬಂದಿರಬಹುದೆಂದು ಅರಣ್ಯ ಇಲಾಖೆ ಅಧಿಕಾರಿ ಗವಿಯಪ್ಪ ತಿಳಿಸಿದ್ದಾರೆ.
ಈ ಸಲಗವನ್ನು ಸಂಜೆ ೬ ಗಂಟೆಯ ನಂತರ ಅರಣ್ಯ ಪ್ರದೇಶಕ್ಕೆ ಓಡಿಸಲಾಗುವುದು. ಅಲ್ಲಿಯವರೆಗೆ ಗ್ರಾಮಸ್ಥರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಆಟೋ ಮೂಲಕ ಮೈಕ್ ಅಳವಡಿಸಿಕೊಂಡು ಜಾಗೃತಿ ಮೂಡಿಸಿದ್ದಾರೆ. ಈ ಸಂದರ್ಭದಲ್ಲಿ ಆನೆಯನ್ನು ನೋಡಲು ಜನರು ಮುಗಿಬಿದ್ದ ದೃಶ್ಯ ಕಂಡುಬಂದಿತು.
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಪ್ರಕರಣದ ತನಿಖೆ ಕೊನೆಯ ಹಂತಕ್ಕೆ ಬಂದು…
ಬೆಂಗಳೂರು: ಕೇರಳ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮೊದಲ ಭಾಷೆಯಾಗಿ ಮಲೆಯಾಳಂ ಕಡ್ಡಾಯ ಕಲಿಕೆ ಮಸೂದೆ ಜಾರಿಗೆ ಮುಂದಾಗಿರುವ ವಿಚಾರಕ್ಕೆ…
ಬೆಂಗಳೂರು: ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ…
ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು…
ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ…
ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ…