ಮೈಸೂರು

ಮೈಸೂರು: ಆಂಬುಲೆನ್ಸ್‌ನಲ್ಲಿ ಆಕ್ಸಿಜನ್‌ ಸೌಲಭ್ಯವಿಲ್ಲದೇ ಮಗು ಸಾವು?

ಮೈಸೂರು: ಆಕ್ಸಿಜನ್‌ ಸೌಲಭ್ಯ ಇಲ್ಲದೇ ಸರ್ಕಾರಿ ಆಂಬುಲೆನ್ಸ್‌ನಲ್ಲಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.

ನಂಜನಗೂಡು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ನಂಜನಗೂಡು ನಗರದ ರತ್ನಮ್ಮ ಹಾಗೂ ಕುಮಾರ್‌ ದಂಪತಿಯ ಮಗು ಸಾವನ್ನಪ್ಪಿದೆ.

ಮಾರ್ಚ್.‌17ರಂದು ರತ್ನಮ್ಮಗೆ ಹೆರಿಗೆಯಾಗಿದ್ದು, ಹೆರಿಗೆಯಾದ ಬಳಿಕ ಕ್ಷಣಾರ್ಧದಲ್ಲೇ ಮಗು ನೀಲಿ ಬಣ್ಣಕ್ಕೆ ತಿರುಗಿದೆ.

ಮಗುವಿನ ಸ್ಥಿತಿಗತಿ ನೋಡಿ ಮೈಸೂರಿನ ಮಕ್ಕಳ ಆಸ್ಪತ್ರೆಗೆ ದಾಖಲಿಸಲು ಆಸ್ಪತ್ರೆ ಸಿಬ್ಬಂದಿ ಮುಂದಾಗಿದ್ದಾರೆ.

ಈ ವೇಳೆ ಅಲ್ಲಿಂದ ಮೈಸೂರಿನ ದೊಡ್ಡಾಸ್ಪತ್ರೆಗೆ ಆಂಬುಲೆನ್ಸ್‌ ಮೂಲಕ ಮಗುವನ್ನು ರವಾನಿಸಲು ಮುಂದಾಗಿದ್ದಾರೆ. ಆಕ್ಸಿಜನ್‌ ಕೊರತೆ ಇದ್ದ ಹಿನ್ನೆಲೆಯಲ್ಲಿ ಮಗು ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದೆ.

ಮಗು ಸಾವನ್ನಪ್ಪುತ್ತಿದ್ದಂತೆ ರೊಚ್ಚಿಗೆದ್ದ ಪೋಷಕರು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆರೋಪ ಮಾಡಿದ್ದು, ಮಗು ಸಾವಿಗೆ ನೀವೇ ಕಾರಣ ಎಂದು ಕಿಡಿಕಾರಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

13 mins ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

18 mins ago

ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಪಿಎಸ್‌ಐ ನೇತೃತ್ವದಲ್ಲಿ ಪೊಲೀಸರ ನಿಯೋಜನೆ

ಚಿಕ್ಕಮಗಳೂರು: ಕೇರಳದ ಯುವತಿಯ ಅಸಹಜ ಸಾವಿನ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೈಅಲರ್ಟ್‌ ಘೋಷಣೆ ಮಾಡಿದೆ. ವಿಶೇಷವಾಗಿ…

1 hour ago

ಒಳ ಮೀಸಲಾತಿ ಗೊಂದಲ: ಏಪ್ರಿಲ್.‌24ರಂದು ವಿಶೇಷ ಸಂಪುಟ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಒಳ ಮೀಸಲಾತಿಯ ಗೊಂದಲವನ್ನು ಬಗೆಹರಿಸಲು ಇದೇ ೨೪ ರಂದು ವಿಶೇಷ ಸಚಿವ ಸಂಪುಟ…

2 hours ago

ಬೇಸಿಗೆಗೆ ಬತ್ತುತ್ತಿವೆ ಬೆಂಗಳೂರಿನ ಪ್ರಮುಖ ಕೆರೆಗಳು

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಲೇ ಇದೆ. ಇನ್ನು ಬೆಂಗಳೂರು ನಗರದಲ್ಲಿ ಬಿರು ಬಿಸಿಲಿಗೆ ನಗರದ ಪ್ರಮುಖ ಕೆರೆಗಳು ಬತ್ತುತ್ತಿವೆ.…

3 hours ago

ವಿನಯ್‌ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ: ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಿಷ್ಟು.!

ಮಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಅಧಿಕೃತ…

3 hours ago