ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರ ವರುಣ ವ್ಯಾಪ್ತಿಯ ತಗಡೂರು ಗ್ರಾಮದ ಮೂವರಲ್ಲಿ ಕಾಲರಾ ರೋಗ ಕಾಣಿಸಿಕೊಂಡಿದೆ.
ತಗಡೂರು ಗ್ರಾಮದ ಕೆಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ಹಿನ್ನಲೆ ಆರೋಗ್ಯ ಇಲಾಖೆ ಪರೀಕ್ಷೆ ನಡೆಸಲು ಮುಂದಾಗಿತ್ತು. ಅದರಂತೆ ಕಳೆದ ಒಂದು ವಾರದಿಂದ ಸತತ 114 ಜನರನ್ನು ಪರೀಕ್ಷೆಗೊಳಪಡಿಸಿತ್ತು. ಈ ವೇಳೆ ಮೂವರಲ್ಲಿ ಕಾಲರಾ ಕಾಣಿಸಿಕೊಂಡಿದೆ.
ಕಾಲರಾ ಕಾಣಿಸಿಕೊಂಡಿದ್ದು ಖಚಿತವಾಗ ಬೆನ್ನಲ್ಲೇ ಗ್ರಾಮದಲ್ಲಿ ಡಿಎಚ್‌ಒ ಶಿವಕುಮಾರ್ ಸೇರಿದಂತೆ ಹಿರಿಯ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಬೋರ್‌ವೆಲ್ ನೀರಿನಿಂದ ಕಾಲರ ಬಂದಿರುವ ಶಂಕೆ ವ್ಯಕ್ತವಾಗಿದ್ದು, ಇದರಿಂದ ಗ್ರಾಮದ ನಾಲ್ಕು ಬೋರ್‌ವೆಲ್ ತಾತ್ಕಲಿಕವಾಗಿ ಸ್ಥಗಿತ ಮಾಡಲಾಗಿದೆ. ನೀರಿನ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಗ್ರಾಮದ ಸಮುದಾಯ ಆಸ್ಪತ್ರೆಯಲ್ಲಿ ಮುಂಜಾಗೃತವಾಗಿ 6 ಜನ ವೈದ್ಯರು, ಆಂಬ್ಯುಲೆನ್ಸ್ ವಾಹನ ನಿಯೋಜನೆ ಮಾಡಲಾಗಿದೆ.



