ತಾಂಡವಪುರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತ್ತೆ ಬಿಜೆಪಿಗೆ ಮತ ನೀಡಿದರೆ ನಮಗೆ ಖಾಲಿ ಚೊಂಬೇ ಗತಿಯಾಗಲಿದೆ. ಆದ್ದರಿಂದ ಜನರ ವಿಶ್ವಾಸ ಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಗೆಲ್ಲಿಸಬೇಕು ಎಂದು ತಾಂಡವಪುರ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಎನ್.ಚಂದ್ರು ಮನವಿ ವಾಡಿದರು.
ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದು ಹತ್ತು ವರ್ಷಗಳು ಕಳೆದರೂ ಅವರು ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಜನರಿಗೆ ಸುಳ್ಳು ಹೇಳಿ ವಂಚಿಸುತ್ತಾ ಬಂದಿದೆ. ಆದ್ದರಿಂದ ಬಿಜೆಪಿ ತಿರಸ್ಕರಿಸಿ, ನುಡಿದಂತೆ ನಡೆದಿರುವ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕೆಂದರು.
ಮುಖಂಡರಾದ ಕೆಂಪುರಸ ನಾಯಕ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.