ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು.
ನಗರದ ಮಾನಸಗಂಗೋತ್ರಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮೈಸೂರು ವಿವಿ ಮತ್ತು ಮಾಳವಿಯ ಮಿಷನ್ ಶಿಕ್ಷಕರ ತರಬೇತಿ ಸಂಸ್ಥೆ ಸಹಭಾಗಿತ್ವದಲ್ಲಿ ನಡೆದ ಪತ್ರಿಕೋದ್ಯಮದ ಉದಯೋನ್ಮುಖ ಪ್ರವೃತ್ತಿಗಳು ಕುರಿತ ಆರು ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಿನಿಮಾ ಕೇವಲ ಮನರಂಜನೆಯಲ್ಲ. ಹಿಂದೆ ಸೀಮಿತ ತಂತ್ರಜ್ಞಾನವಿದ್ದರೂ ಸಮಾಜದ ವಾಸ್ತವಗಳನ್ನು ಪ್ರತಿಬಿಂಬಿ ಸುವ ಅರ್ಥಪೂರ್ಣ ಸಿನಿಮಾಗಳು ಹೆಚ್ಚಾಗಿ ಬರುತ್ತಿದ್ದವು. ಆದರೆ ಇತ್ತೀಚೆಗೆ ಅಂತಹ ಸಿನಿಮಾಗಳ ಸಂಖ್ಯೆ ವಿರಳ ವಾಗಿದೆ. ಸಿನಿಮಾ ಮನರಂಜನೆ ಜೊತೆಗೆಸಮಾಜಕ್ಕೆ ಶಿಕ್ಷಣ ನೀಡುವ ಪರಿಣಾಮ ಕಾರಿ ಮಾಧ್ಯಮವಾಗಬೇಕು. ಇಂದಿನ ಮಾಧ್ಯಮ ಗಳು ವಿಶ್ವಾಸಾರ್ಹತೆ ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಾಮಾಜಿಕ ಉತ್ತಮ ಸಂದೇಶಗಳನ್ನು ನೀಡಬೇಕು ಎಂದರು.
ಇದನ್ನು ಓದಿ: ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ
ನಂತರ ಗೋಷ್ಠಿಯಲ್ಲಿ ಟಿವಿ ೯ ವರದಿಗಾರ ರಾಮ್ ಮಾತನಾಡಿ, ಸುದ್ದಿ ನೀಡುವ ಆತುರದಲ್ಲಿ ನಿಖರತೆಯನ್ನು ಮರೆಯಬಾರದು. ಟಿಆರ್‌ಪಿ ಹಪಾಹಪಿ ಹಾಗೂ ಸಾಮಾಜಿಕ ಮಾಧ್ಯಮಗಳ ಸುಳ್ಳುಸುದ್ದಿಗಳ ಅಬ್ಬರದ ನಡುವೆ ಸತ್ಯನಿಷ್ಠ ವರದಿಗಾರಿಕೆಯೇ ಮಾಧ್ಯಮದ ಅಸ್ತಿತ್ವವನ್ನು ಉಳಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿಭಾಗದ ಮುಖ್ಯಸ್ಥರಾದ ಪ್ರೊ.ಎನ್. ಮಮತ, ಪ್ರೊ.ನಿರಂಜನ ವಾನಳ್ಳಿ, ಅತಿಥಿ ಉಪನ್ಯಾಸಕರಾದ ಡಾ.ಕುಮಾರಸ್ವಾಮಿ ಹಾಗೂ ಡಾ.ಬಿ.ಸಿ.ಸಂಜಯ್ ಉಪಸ್ಥಿತರಿದ್ದರು, ವಿದ್ಯಾರ್ಥಿಗಳು ಸಂವಾದದ ಮೂಲಕ ಹಲವು ವಿಷಯಗಳನ್ನು ಚರ್ಚಿಸಿದರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…