ಮೈಸೂರು

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು.

ನಗರದ ಮಾನಸಗಂಗೋತ್ರಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮೈಸೂರು ವಿವಿ ಮತ್ತು ಮಾಳವಿಯ ಮಿಷನ್ ಶಿಕ್ಷಕರ ತರಬೇತಿ ಸಂಸ್ಥೆ ಸಹಭಾಗಿತ್ವದಲ್ಲಿ ನಡೆದ ಪತ್ರಿಕೋದ್ಯಮದ ಉದಯೋನ್ಮುಖ ಪ್ರವೃತ್ತಿಗಳು ಕುರಿತ ಆರು ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಿನಿಮಾ ಕೇವಲ ಮನರಂಜನೆಯಲ್ಲ. ಹಿಂದೆ ಸೀಮಿತ ತಂತ್ರಜ್ಞಾನವಿದ್ದರೂ ಸಮಾಜದ ವಾಸ್ತವಗಳನ್ನು ಪ್ರತಿಬಿಂಬಿ ಸುವ ಅರ್ಥಪೂರ್ಣ ಸಿನಿಮಾಗಳು ಹೆಚ್ಚಾಗಿ ಬರುತ್ತಿದ್ದವು. ಆದರೆ ಇತ್ತೀಚೆಗೆ ಅಂತಹ ಸಿನಿಮಾಗಳ ಸಂಖ್ಯೆ ವಿರಳ ವಾಗಿದೆ. ಸಿನಿಮಾ ಮನರಂಜನೆ ಜೊತೆಗೆಸಮಾಜಕ್ಕೆ ಶಿಕ್ಷಣ ನೀಡುವ ಪರಿಣಾಮ ಕಾರಿ ಮಾಧ್ಯಮವಾಗಬೇಕು. ಇಂದಿನ ಮಾಧ್ಯಮ ಗಳು ವಿಶ್ವಾಸಾರ್ಹತೆ ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಾಮಾಜಿಕ ಉತ್ತಮ ಸಂದೇಶಗಳನ್ನು ನೀಡಬೇಕು ಎಂದರು.

ಇದನ್ನು ಓದಿ: ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ನಂತರ ಗೋಷ್ಠಿಯಲ್ಲಿ ಟಿವಿ ೯ ವರದಿಗಾರ ರಾಮ್ ಮಾತನಾಡಿ, ಸುದ್ದಿ ನೀಡುವ ಆತುರದಲ್ಲಿ ನಿಖರತೆಯನ್ನು ಮರೆಯಬಾರದು. ಟಿಆರ್‌ಪಿ ಹಪಾಹಪಿ ಹಾಗೂ ಸಾಮಾಜಿಕ ಮಾಧ್ಯಮಗಳ ಸುಳ್ಳುಸುದ್ದಿಗಳ ಅಬ್ಬರದ ನಡುವೆ ಸತ್ಯನಿಷ್ಠ ವರದಿಗಾರಿಕೆಯೇ ಮಾಧ್ಯಮದ ಅಸ್ತಿತ್ವವನ್ನು ಉಳಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿಭಾಗದ ಮುಖ್ಯಸ್ಥರಾದ ಪ್ರೊ.ಎನ್. ಮಮತ, ಪ್ರೊ.ನಿರಂಜನ ವಾನಳ್ಳಿ, ಅತಿಥಿ ಉಪನ್ಯಾಸಕರಾದ ಡಾ.ಕುಮಾರಸ್ವಾಮಿ ಹಾಗೂ ಡಾ.ಬಿ.ಸಿ.ಸಂಜಯ್ ಉಪಸ್ಥಿತರಿದ್ದರು, ವಿದ್ಯಾರ್ಥಿಗಳು ಸಂವಾದದ ಮೂಲಕ ಹಲವು ವಿಷಯಗಳನ್ನು ಚರ್ಚಿಸಿದರು.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

6 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

7 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

8 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

10 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

14 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

14 hours ago