ಮೈಸೂರು

ಜಾತ್ಯತೀತ ಮೌಲ್ಯದ ಸುತ್ತೂರು : ಸಿಎಂ ಬಣ್ಣನೆ

ಮೈಸೂರು: ಸುತ್ತೂರು ಮಠ ಶಿಕ್ಷಣ ಮತ್ತು ಅನ್ನ ದಾಸೋಹ ನಡೆಸುತ್ತಾ ಇಡೀ ಸಮಾಜದ ಆಸ್ತಿಯಾಗಿದೆ. ಜಾತ್ಯತೀತ ಮೌಲ್ಯಗಳು ಸುತ್ತೂರು ಮಠದ ಮೌಲ್ಯಗಳೂ ಆಗಿವೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ ದರ್ಶನ ಪಡೆದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಜಾತ್ಯತೀತ ಸಮಾಜ ನಿರ್ಮಾಣ ಸಂವಿಧಾನದ ಮೂಲ ಉದ್ದೇಶ. ಶರಣಶ್ರೇಷ್ಠರಾದ ಬಸವಾದಿ ಶರಣರ ಆಶಯವೂ ಆಗಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ಬಸವಣ್ಣನವರ ಆಶಯದಂತೆ ಜಾತಿ, ಧರ್ಮದ ಹೆಸರಿನ ಮನುಷ್ಯ ತಾರತಮ್ಯ ಹಾಗೂ ಮೌಡ್ಯಗಳನ್ನು ತೊರೆಯಬೇಕು ಎಂದು ಕರೆ ನೀಡಿದರು.

ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯ ಆರ್ಥಿಕವಾಗಿ, ಸಮಾಜಿಕವಾಗಿ ಇಲ್ಲ . ಇದು ಸಿಗದ ಹೊರತು ಸ್ವಾತಂತ್ರ್ಯದ ಆಶಯ ಪೂರ್ತಿ ಆಗುವುದಿಲ್ಲ ಎನ್ನುವ ಮಾತನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಜಾರಿ ಸಭೆಯಲ್ಲೇ ಹೇಳಿದ್ದರು. ಅವತ್ತಿನ‌ ಅವರು ಮಾತು ಇವತ್ತಿಗೂ ಸತ್ಯ ಎಂದರು.

ಬಸವಣ್ಣನವರು 850 ವರ್ಷಗಳ ಹಿಂದೆ “ಇವ ನಾರವ ಎಂದು ಪ್ರಶ್ನಿಸದೆ, ಇವ ನಮ್ಮವ” ಎಂದು ಹೇಳಿ ಅಂದಿದ್ದರು. ಆದರೂ ಇವತ್ತಿಗೂ ನಾವು ಜಾತಿ ಕೇಳುವುದನ್ನು ನಿಲ್ಲಿಸಿಲ್ಲ, ಜಾತಿ-ಧರ್ಮದ ಅನಿಷ್ಠ ತಾರತಮ್ಯವನ್ನು ಇವತ್ತಿಗೂ ಕಾಣುತ್ತೇನೆ ಎಂದರು.

ನಾನು ವೈಯುಕ್ತಿಕವಾಗಿ ಬಸವಣ್ಣನವರ ಅಪ್ಪಟ ಹಿಂಬಾಲಕ. ಅದಕ್ಕೇ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಕಡ್ಡಾಯಗೊಳಿಸಿದೆ ಎಂದರು.

ವಿದ್ಯಾವಂತರೂ ಕರ್ಮ‌ಸಿದ್ಧಾಂತವನ್ನು ಆಚರಿಸುವ ದುರಂತವನ್ನು ನಾವು ಕಾಣುತ್ತೇವೆ. ಯಾವ ದೇವರೂ ಬಡವನಾಗಿರು, ಹಸಿದುಕೊಂಡಿರು, ಹರಿದ ಬಟ್ಟೆಯಲ್ಲಿರು ಎಂದು ಹಣೆಬರಹ ಬರೆಯುವುದಿಲ್ಲ. ಇಂಥಾ ಮೌಡ್ಯವನ್ನು ವಿದ್ಯಾವಂತರೂ ಆಚರಿಸುತ್ತಿದ್ದಾರೆ. ಹೀಗಾದಾಗ ಅವರ ವಿದ್ಯೆಗೆ ಗೌರವ ಬರುತ್ತದಾ ಎಂದು ಪ್ರಶ್ನಿಸಿದರು.

ಜಾತಿ ಆಧಾರದಲ್ಲಿ ಮನುಷ್ಯನ ಯೋಗ್ಯತೆ ಅಳೆಯುವ ಪದ್ಧತಿಯನ್ನು ನಮ್ಮ ಸಂವಿಧಾನ ವಿರೋಧಿಸಿತು. ಪ್ರತಿಭೆ ಮತ್ತು ಸಾಮರ್ಥ್ಯ ಪ್ರತಿಯೊಬ್ಬರ ಸ್ವತ್ತು. ಅವಕಾಶಗಳು ಸಿಗಬೇಕಷ್ಟೆ. ಅವಕಾಶ ಸಿಕ್ಕಾಗ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತವೆ. ಇದಕ್ಕೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.

ಕಾಯಕ ಮತ್ತು ದಾಸೋಹ ಎರಡೂ ಬಸವಾದಿ ಶರಣರ ಆಶಯವಾಗಿತ್ತು. ಕಾಯಕ ಅಂದ್ರೆ ಉತ್ಪತ್ತಿ, ದಾಸೋಹ ಅಂದರೆ ವಿತರಣೆ ಎಂದು ವಿಶ್ಲೇಷಿಸಿದರು.

ನಾವು ಉಚಿತವಾಗಿ ಅಕ್ಕಿ ಕೊಟ್ಟಿದ್ದರಿಂದ ಬಡವರು, ಶ್ರಮಿಕರು ಸೋಮಾರಿಗಳಾಗುತ್ತಿದ್ದಾರೆ ಎನ್ನುವುದು ದುಡಿಯದ ಗ್ರ ಮೈಗಳ್ಳರು, ದುಡಿಯದೆ ಬೊಜ್ಜು ಬೆಳೆಸಿಕೊಂಡವರು ಮಾತ್ರ ಹೇಳಲು ಸಾಧ್ಯ ಎಂದರು.

ಬರಿ ಬಾಯಿ ಮಾತಿನಲ್ಲಿ ಬಸವಣ್ಣ ಮತ್ತು ಅಂಬೇಡ್ಕರ್ ಅವರ ಆಶಯಗಳು ಜಾರಿ ಆಗುವುದಿಲ್ಲ. ಆಶಯಗಳಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಬೇಕು. ಈ ಉದ್ದೇಶದಿಂದಲೇ ನಾವು ಗ್ಯಾರಂಟಿಗಳನ್ನು ಜಾರಿಗೊಳಿಸಿದೆವು ಎಂದು ಕರೆ ನೀಡಿದರು.

ಆರ್ಥಿಕ, ಸಾಮಾಜಿಕ ಚಲನೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ಹೋಗಲು ಸಾಧ್ಯ. ನಮ್ಮ ಗ್ಯಾರಂಟಿಗಳು ಪ್ರತೀ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಚಲನೆ ನೀಡಿವೆ. ಜನರ ಕೊಳ್ಳುವ ಶಕ್ತಿಯನ್ನು ನಾವು ಹೆಚ್ಚಿಸಿದ್ದರಿಂದಲೇ ರಾಜ್ಯದ ಆರ್ಥಿಕ ಪರಿಸ್ಥಿತಿ ಕೂಡ ಸದೃಢವಾಗಿದೆ ಎಂದರು.

ಬಡವರ ಆರ್ಥಿಕ ಅಸಹಾಯಕತೆಯನ್ನು ಶೋಷಿಸುವ ಮೈಕ್ರೋ ಫೈನಾನ್ಸ್ ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರುತ್ತಿದ್ದೇವೆ ಎಂದರು.

ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ: ದೂರು ಕೊಡಿ

ಮೈಕ್ರೋ ಫೈನಾನ್ಸ್ ಗಳ ವಸೂಲಿ ಕ್ರಮಕ್ಕೆ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ದೂರು ಕೊಡಿ. ಕಾನೂನು ಕ್ರಮ ತಗೊತೀವಿ ಎಂದು ಸಿದ್ದರಾಮಯ್ಯ ಅವರು ಕರೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

2 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

2 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

2 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

3 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

3 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago