ಮೈಸೂರು: ಸೆಪ್ಟೆಂಬರ್.22ರಿಂದ ಅಕ್ಟೋಬರ್.7ರವರೆಗೆ ಮಧ್ಯಂತರ ರಜೆ ಇರುವ ಹಿನ್ನೆಲೆಯಲ್ಲಿ ಈ ವೇಳೆ ಮೈಸೂರು ಜಿಲ್ಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ ಯಾವುದೇ ರೀತಿಯ ತರಗತಿಗಳನ್ನು ನಡೆಸದಂತೆ ಶಾಲಾ ಶಿಕ್ಷಣ ಇಲಾಖೆ ಮೈಸೂರು ಉಪನಿರ್ದೇಶಕರ ಕಚೇರಿ ಆದೇಶ ಹೊರಡಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ಮೈಸೂರು ಉಪನಿರ್ದೇಶಕರು, 2025-26ನೇ ಸಾಲಿನ ಶಾಲಾ ಶಿಕ್ಷಣಾ ಇಲಾಖೆಯ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್.22ರಿಂದ ಅಕ್ಟೋಬರ್.7ರವರೆಗೂ ಮಧ್ಯಂತರ ರಜೆ ಇರುವುದರಿಂದ ಮೈಸೂರು ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನರಹಿತ ಕಾಲೇಜಿನ ಪ್ರಾಚಾರ್ಯರು ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ಯಾವುದೇ ರೀತಿಯ ತರಗತಿಗಳು, ವಿಶೇಷ ತರಗತಿಗಳು ಅಥವಾ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಒಂದು ವೇಳೆ ಈ ನಿಯಮಗಳನ್ನು ಪಾಲಿಸದಿದ್ದಲ್ಲಿ ಅಂತಹ ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…