ಮೈಸೂರು

ದಸರಾ ರಜೆ ವೇಳೆ ತರಗತಿಗಳನ್ನು ನಡೆಸುವಂತಿಲ್ಲ: ಶಾಲಾ ಶಿಕ್ಷಣ ಇಲಾಖೆ ಖಡಕ್‌ ಆದೇಶ

ಮೈಸೂರು: ಸೆಪ್ಟೆಂಬರ್.‌22ರಿಂದ ಅಕ್ಟೋಬರ್.‌7ರವರೆಗೆ ಮಧ್ಯಂತರ ರಜೆ ಇರುವ ಹಿನ್ನೆಲೆಯಲ್ಲಿ ಈ ವೇಳೆ ಮೈಸೂರು ಜಿಲ್ಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ ಯಾವುದೇ ರೀತಿಯ ತರಗತಿಗಳನ್ನು ನಡೆಸದಂತೆ ಶಾಲಾ ಶಿಕ್ಷಣ ಇಲಾಖೆ ಮೈಸೂರು ಉಪನಿರ್ದೇಶಕರ ಕಚೇರಿ ಆದೇಶ ಹೊರಡಿಸಿದೆ.

ಈ ಕುರಿತು ಆದೇಶ ಹೊರಡಿಸಿರುವ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ಮೈಸೂರು ಉಪನಿರ್ದೇಶಕರು, 2025-26ನೇ ಸಾಲಿನ ಶಾಲಾ ಶಿಕ್ಷಣಾ ಇಲಾಖೆಯ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್.‌22ರಿಂದ ಅಕ್ಟೋಬರ್.‌7ರವರೆಗೂ ಮಧ್ಯಂತರ ರಜೆ ಇರುವುದರಿಂದ ಮೈಸೂರು ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನರಹಿತ ಕಾಲೇಜಿನ ಪ್ರಾಚಾರ್ಯರು ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ಯಾವುದೇ ರೀತಿಯ ತರಗತಿಗಳು, ವಿಶೇಷ ತರಗತಿಗಳು ಅಥವಾ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಒಂದು ವೇಳೆ ಈ ನಿಯಮಗಳನ್ನು ಪಾಲಿಸದಿದ್ದಲ್ಲಿ ಅಂತಹ ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

2 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

4 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

10 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

10 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

10 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

10 hours ago