ಮೈಸೂರು

ಯುವಜನರು ತಾವೇ ನಿಜವಾದ ಹಿರೋ-ಹಿರೋಯಿನ್‌ ಆಗಬೇಕು : ಕೆ.ಎ ದಯಾನಂದ

ಮೈಸೂರು : ಯುವ ಜನರು ಮೊಬೈಲ್‌ ಗೀಳು ಹಾಗೂ ಇಲ್ಲಸಲ್ಲದ ವಿಚಾರಗಳನ್ನು ತಲೆಯಲ್ಲಿ ತುಂಬಿಕೊಂಡು ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ಗೃಹ ಮಂಡಳಿ ಆಯುಕ್ತ ಕೆ.ಎ. ದಯಾನಂದ ವಿಷಾದಿಸಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಇವುಗಳ ಸಹಯೋಗದಲ್ಲಿ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಐಎಎಸ್, ಕೆಎಎಸ್ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅಧ್ಯಯನ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಮೊಬೈಲ್ ಲೋಕ ವಿದ್ಯಾರ್ಥಿಗಳು ಮತ್ತು ಯುವಜನರನ್ನು ದಾರಿ ತಪ್ಪಿಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವುದರಿಂದ ಹಣ ಸಂಪಾದಿಸಬಹುದು, ಜೀವನದಲ್ಲಿ ಮುಂದೆ ಬರಬಹುದು ಎಂಬ ಭ್ರಮೆಯಲ್ಲಿ ಇಂದಿನ ಯುವಪೀಳಿಗೆ ಸಿಲುಕಿದ್ದಾರೆ. ರೀಲ್ಸ್‌ಗಳಿಗಾಗಿ ತಮ್ಮ ಶ್ರಮ ಮತ್ತು ಬುದ್ಧಿಶಕ್ತಿಯನ್ನು ವ್ಯರ್ಥಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಉತ್ತಮ ನಡತೆ, ಆರೋಗ್ಯ, ಶಿಕ್ಷಣ, ಗುರಿಯ ಬಗ್ಗೆ ಸ್ಪಷ್ಟತೆ ಮತ್ತು ಜ್ಞಾನ ಬೆಳೆಸಿಕೊಳ್ಳಬೇಕು. ಹಿಗಿದ್ದಾಗ ಮಾತ್ರ ಅವರು ಜೀವನದಲ್ಲಿ ಎಂದಿಗೂ ಸೋಲುವುದಿಲ್ಲ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಸಿನಿಮಾ ನಟರು, ಕ್ರಿಕೆಟ್ ಆಟಗಾರರನ್ನು ನೋಡುವುದಕ್ಕೆ, ಅವರ ಜೊತೆ ಫೊಟೋ, ಸೆಲ್ಫಿ ತೆಗೆಯಿಸಿಕೊಳ್ಳುವುದಕ್ಕೆ ಮಾತ್ರ ತಮ್ಮ ಕನಸುಗಳನ್ನು ಸೀಮಿತಗೊಳಿಸಿಕೊಳ್ಳಬಾರದು. ಸ್ಪರ್ಧಾತ್ಮಕ ಪರೀಕೆಗಳಲ್ಲಿ ಉತ್ತೀರ್ಣರಾಗುವ ಮೂಲಕ ತಾವೇ ನಿಜವಾದ ಹೀರೋ-ಹೀರೋಯಿನ್ ಆಗಬೇಕು ಎಂದು ಕರೆ ನೀಡಿದರು.

ಕನಸುಗಳಿಲ್ಲದೆ ಬದುಕಿಲ್ಲ; ಕನಸುಗಳನ್ನು ಕಟ್ಟಿಕೊಂಡಾಗ ಮಾತ್ರ ಗುರಿ ಮುಟ್ಟುವ ದಾರಿ ಕಾಣುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ತಾವು ಕಾಣುವ ಕನಸಿನ ಬಗ್ಗೆ ಸ್ಪಷ್ಟತೆ ಇರಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು. ನಾವಿರುವ ಸಂಕಷ್ಟದ ಪರಿಸ್ಥಿತಿಯಿಂದ ಬಹುಬೇಗ ಬಿಡುಗಡೆ ಹೊಂದಬೇಕು ಎಂಬ ಗುರಿ ನಮ್ಮ ಕನಸುಗಳ ಧ್ಯೇಯೋದ್ದೇಶವಾಗಿರಬೇಕು ಎಂದು ಕಿವಿಮಾತು ಹೇಳಿದರು.

ಓದಿನ ವಿಚಾರದಲ್ಲಿ ಸ್ವಲ್ಪ ಹೊತ್ತಿನ ನಂತರ ಓದಿದರಾಯಿತು, ನಾಳೆ ಓದಿದರಾಯಿತು ಎಂಬ ಸೋಮಾರಿತನವನ್ನು ಬಿಡಬೇಕು. ಒಂದು ನಿಮಿಷವನ್ನೂ ವ್ಯರ್ಥ ಮಾಡದೇ ಓದಬೇಕು. ಗುರಿ ಮುಟ್ಟುವವರೆಗೂ ನಿರಂತರವಾಗಿ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು. ಆವಾಗ ಮಾತ್ರ ತಮ್ಮ ಕನಸು ಸಕಾರಗೊಳ್ಳುತ್ತದೆ ಎಂದು ಕಿವಿಮಾತು ಹೇಳಿದರು.

ಕೆಲವು ವಿದ್ಯಾರ್ಥಿಗಳು ಮನೆಯಲ್ಲಿ ಬಡತನವಿದೆ. ಇಂಗ್ಲೀಷ್ ಬರುವುದಿಲ್ಲ. ತರಬೇತಿ ಕೇಂದ್ರಗಳಲ್ಲಿ ತರಬೇತಿ ಪಡೆಯುವಷ್ಟು ಹಣವಿಲ್ಲ. ಓದುವುದಕ್ಕೆ ಸಮಯ ಸಿಗುತ್ತಿಲ್ಲ ಇತ್ಯಾದಿ ಕುಂಟು ನೆಪಗಳನ್ನು ಮುಂದೊಡ್ಡಿ ಓದುವುದನ್ನು ಮುಂದೂಡುತ್ತಾರೆ. ಹೀಗೆ ನೆಪಗಳನ್ನು ಹೇಳಿಕೊಂಡು ಕಾಲ ಕಳೆದರೆ ಜೀವನ ಪೂರ್ತಿ ಕಷ್ಟದಲ್ಲಿಯೇ ಬದುಕಬೇಕಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸರ್ಕಾರ ನೀಡುವ ಸೌಲಭ್ಯಗಳು, ಸಾರ್ವಜನಿಕ ಗ್ರಂಥಾಲಯಗಳನ್ನು ಸದುಪಯೋಗ ಪಡಿಸಿಕೊಂಡು ಓದಬೇಕು. ಸಮಸ್ಯಗಳನ್ನೇ ಸಾಧನೆಯ ಮೆಟ್ಟಿಲು ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕೊಡಗು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಉನ್ನತ ಹುದ್ದೆಗಳನ್ನು ಪಡೆದುಕೊಂಡರೆ ತಮ್ಮ ಕಷ್ಟಗಳ ಜೊತೆಗೆ ಸಮಾಜದ ಸಮಸ್ಯೆಗಳನ್ನೂ ಪರಿಹರಿಸಬಹುದು. ನಮ್ಮ ಸ್ಪಷ್ಟವಾದ ಗುರಿಯಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕನ್ನೂ ಸುಧಾರಿಸಬಹುದು ಎಂದು ತಿಳಿಸಿದರು.

ಎಲ್ಲರಿಗೂ ಸಮಾನವಾದ ಅವಕಾಶಗಳಿವೆ. ಆದರೆ ಯಾರು ಅವಕಾಶಗಳನ್ನು ಪಡೆಯುವ ನಿಟ್ಟಿನಲ್ಲಿ ಪೂರ್ವ ಸಿದ್ಧತೆಯನ್ನು ಮಾಡಿಕೊಂಡಿರುತ್ತಾರೋ ಅವರಿಗೆ ಅವಕಾಶಗಳು ದೊರೆಯುತ್ತವೆ. ಯಾರು ಯಾವ ಸಿದ್ಧತೆಯನ್ನೂ ಮಾಡಿಕೊಳ್ಳದೇ ಕಾಲ ಕಳೆಯುತ್ತಾರೋ ಅವರು ಅವಕಾಶದಿಂದ ವಂಚಿತರಾಗುತ್ತಾರೆ ಎಂದರು.

ಈಗಿನ ಯುವ ಪೀಳಿಗೆ ತುಂಬಾ ಬುದ್ಧಿವಂತರಾಗಿದ್ದಾರೆ. ಆದರೆ ಅವರಲ್ಲಿ ತಾಳ್ಮೆ ಮತ್ತು ಶ್ರಮ ಇರುವುದಿಲ್ಲ. ಒಳಿತು ಕೆಡುಕಿನ ಬಗ್ಗೆ ತಿಳಿದಿರುವುದಿಲ್ಲ. ಹಸಿವಿನ ಆಳದ ಅರಿವಿರುವುದಿಲ್ಲ. ಆದ್ದರಿಂದಲೇ ಅವರು ಪುಷ್ಪಾ ಚಿತ್ರದ ನಾಯಕ ನಟನನ್ನು ನೋಡಲು ಹೋಗಿ ಕಾಲ್ತುಳಿತಕ್ಕೆ ಸಿಲುಕಿದರು. ಹಾಗೇಯೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕ್ರಿಕೆಟ್ ಆಟಗಾರರನ್ನು ನೋಡಲು ಹೋಗಿ ಕಾಲ್ತುಳಿತಕ್ಕೆ ಬಲಿಯಾದರು. ಯುವ ಪೀಳಿಗೆಯಲ್ಲಿ ಹಸಿವು-ಅಕ್ಷರದ ಅರಿವಿದ್ದರೆ ತಾವೇ ನಿಜವಾದ ಪ್ರಖ್ಯಾತ ವ್ಯಕ್ತಿಗಳಾಗಿ ಬೆಳೆಯುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಕರಾಮುವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ, ಪರೀಕ್ಷಾಂಗ ಕುಲಸಚಿವ ಡಾ.ಆನಂದ್‌ಕುಮಾರ್, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

16 mins ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

18 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

21 mins ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

27 mins ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

32 mins ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

42 mins ago