ಮೈಸೂರು

ವಾಯುಭಾರ ಕುಸಿತ| ಮೈಸೂರಲ್ಲಿ ಮೋಡಕವಿದ ವಾತಾವರಣ

ಮೈಸೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮತ್ತೊಂದು ಚಂಡಮಾರುತ ರೂಪುಗೊಂಡಿದೆ. ಇದರಿಂದ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡಕವಿದ ವಾತವರಣವಿದ್ದು ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ. ಮೈಸೂರಲ್ಲೂ ಸಹ ಮುಂಜಾನೆಯಿಂದಲೇ ಮೋಡಕವಿದ ವಾತವರಣ ಸೃಷ್ಟಿಯಾಗಿದೆ.

ರಾಜ್ಯದ ಕೆಲವೆಡೆ ಇಂದು ಭಾರಿ ಮಳೆಯಾಗುವ ಸಂಭವವಿದ್ದು, ಮೈಸೂರು ಬೆಂಗಳೂರು ಸೇರಿದಂತೆ ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕಳೆದೊಂದು ವಾರದಲ್ಲಿ ತಮಿಳುನಾಡು, ಆಂಧ್ರ ಪ್ರದೇಶ, ಕರ್ನಾಟಕದ ಭಾಗಗಳಲ್ಲಿ ಫೆಂಗಲ್‌ ಚಂಡಮಾರುತದಿಂದಾದ ಅವಾಂತರಗಳಿಂದ ಜನರು ಸುಧಾರಿಸಿಕೊಳ್ಳುವ ಮುನ್ನವೇ ಬಂಗಾಳ ಕೊಲ್ಲಿಯ ಮತ್ತೊಂದು ಚಂಡಮಾರುತ ಆತಂಕ ಸೃಷ್ಟಿಸಿದೆ.

ತಮಿಳುನಾಡಲ್ಲಿ ವ್ಯಾಪಕ ಮಳೆ
ವಾಯುಭಾರ ಕುಸಿತದಿಂದ ತಮಿಳುನಾಡು ಹಾಗೂ ಪುದುಚೇರಿಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ತಮಿಳುನಾಡಿನ ಸುಮಾರು 22 ಜಿಲ್ಲೆಗಳಲ್ಲಿ ಗುರುವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈಗಾಗಲೇ ಕಾರೈಕಲ್‌ನಲ್ಲಿ 8 ಸೆಂ.ಮೀ ಮಳೆಯಾಗಿದ್ದು, ಆದಿರಾಮಪಟ್ಟಣಂ, ನಾಗಪಟ್ಟಣಂ, ಕಡಲೂರು ಹಾಗೂ ಚೆನ್ನೈನ ಕೆಲವು ಭಾಗದಲ್ಲಿ 5 ರಿಂದ 7 ಸೆಂ. ಮೀ ಮಳೆಯಾಗಿದೆ.

ಡಿ.13 ರವರೆಗೆ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಕೇರಳ, ಪುದುಚೇರಿ, ಆಂಧ್ರಪ್ರದೇಶಕ್ಕೆ ಭಾರಿ ಮಳೆಯ ಎಚ್ಚರಿಕೆ ನೀಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಲವು ತಿಂಗಳುಗಳ ಬಳಿಕ ಕನ್ನಡ ಚಿತ್ರಕ್ಕೆ ಚಿಂದಿ ರೇಟಿಂಗ್ಸ್‌

ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…

9 hours ago

ಮಂಡ್ಯ: ಸಣ್ಣ, ಅತಿಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ: ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…

9 hours ago

ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆ: ಶಾಸಕ ರವಿಕುಮಾರ್‌

ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್‌ ತಿಳಿಸಿದರು. ಮಂಡ್ಯ ತಾಲ್ಲೂಕಿನ…

9 hours ago

ನಾನು ಸಾಮಾಜಿಕ‌ ಬಹಿಷ್ಕಾರದ ಕ್ರೂರತೆ ನೋಡಿ ಬೆಳೆದವನು: ಪರಿಷತ್ ಸದಸ್ಯ ಕೆ ಶಿವಕುಮಾರ್

ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್‌ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…

10 hours ago

ಸಮಾಜದಲ್ಲಿ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ: ಸಿಎಂ ಸಿದ್ದರಾಮಯ್ಯ ಬೇಸರ

ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…

10 hours ago

2028ರವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…

11 hours ago