ಹೆಚ್.ಡಿ ಕೋಟೆ : ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಆದರೆ, ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ. 55 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ತೆಗೆದಿರಿಸಿದ್ದೀವಿ. 80 ಸಾವಿರ ಕೋಟಿ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಿಟ್ಟೇವೆ. ಈ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.
ಇದನ್ನೂ ಓದಿ:- ಮೈಸೂರು | ಅಪರಾಧಗಳ ಬಗ್ಗೆ ಅರಿವು ಮೂಡಿಸುತ್ತಿರುವ ಪೊಲೀಸರು
ಬಿಜೆಪಿಯವರು ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ. ಹಾಲಿನ ದರ 4ರೂ ಹೆಚ್ಚು ಮಾಡಿ ಇದರಲ್ಲಿ ಒಂದೂ ರೂಪಾಯಿಯನ್ನೂ ನಾವು ಇಟ್ಟುಕೊಳ್ಳದೆ ಅಷ್ಟನ್ನೂ ರೈತರಿಗೆ, ಗೋಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೇವೆ.
ಆದರೆ ಬಿಜೆಪಿ ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್ , ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿ ಎಲ್ಲದರ ಬೆಲೆ ಹೆಚ್ಚಿಸಿದ್ದು ಕೇಂದ್ರದ ಬಿಜೆಪಿ ಸರ್ಕಾರ, ಮೋದಿ ಸರ್ಕಾರ. ಆದ್ದರಿಂದ ಜನಾಕ್ರೋಶ ಇರುವುದು ಬಿಜೆಪಿ ಸರ್ಕಾರದ ಮೋದಿಯ ವಿರುದ್ಧವೇ ಹೊರತು ನಮ್ಮ ಕಾಂಗ್ರೆಸ್ ಸರ್ಕಾರದ ಮೇಲಲ್ಲ ಎಂದು ಬಿಜೆಪಿಯ ಜನಕ್ರೋಶ ಯಾತ್ರೆಯನ್ನು ವ್ಯಂಗ್ಯವಾಡಿದರು.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…