ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.
ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ನನಗೆ ಸಂಪೂರ್ಣ ವಿಶ್ವಾಸ ಇದೆ. ಮೈಸೂರಿನ ಜನ ಮಾತ್ರ ಅಲ್ಲ, ಇಡೀ ನಾಡಿನ ಜನ ನಾನು ಇರಬೇಕೆಂದು ಬಯಸಿದ್ದಾರೆ. ಅಂತಿಮ ತೀರ್ಮಾನ ಮಾಡುವುದು ಹೈಕಮಾಂಡ್ ಎಂದು ಹೇಳಿದರು.
ಇನ್ನು ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತರೆಡು ಬಜೆಟ್ ಮಂಡಿಸುತ್ತೇನೆ. ನನಗೆ ಹೈಕಮಾಂಡ್ ಮೇಲೆ ಸಂಪೂರ್ಣವಾದ ವಿಶ್ವಾಸ ಇದೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ದ. ನನಗೆ ಬಜೆಟ್‌ನ ದಾಖಲೆಗಳ ಮೇಲೆ ನಂಬಿಕೆ ಇಲ್ಲ. ಆದರೆ ಇನ್ನರೆಡು ಬಜೆಟ್ ಮಂಡಿಸುವ ಅವಕಾಶ ಸಿಕ್ಕರೆ ಮಂಡಿಸುತ್ತೇನೆ. ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ನೀವು ಈ ವಿಚಾರದಲ್ಲಿ ಏನೇ ಹಿಂದೆ ಮುಂದೆ ಪ್ರಶ್ನೆ ಕೇಳಿದರು ನನ್ನ ಉತ್ತರ ಹೈಕಮಾಂಡ್. ಜನ ಅವಕಾಶ ಕೊಟ್ಟರೆ ಮಂಡಿಸುತ್ತೇನೆ ಎಂದು ಹೇಳಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…