ಮೈಸೂರು

ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆಗೆ ಸಿಎಂ ಟೀಕೆ

  • ಬಿಜೆಪಿ ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದೆ
  • ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂಡಾ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ಅವರು ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವ ಬಗ್ಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದ ಅವರು ಜೆ.ಪಿ. ನಡ್ಡಾ ಅವರ ಅಧ್ಯಕ್ಷತೆಯಲ್ಲಿಯೇ ಪ್ರತಿಭಟನೆ ಮಾಡಲಿ. ಮೂಡಾ ಬಗ್ಗೆ ತನಿಖೆ ಈಗಾಗಲೇ ನಡೆಯುತ್ತಿದೆ ಎಂದರು.

ಕಾನೂನುಬಾಹಿರವಾಗಿದ್ದರೇ ದಾಖಲೆ ನೀಡಲಿ : ಬದಲಿ ನಿವೇಶನ ನೀಡಿರುವುದು ಕಾನೂನುಬದ್ಧವಾಗಿದೆ ಎನ್ನುವುದು ನಮ್ಮ ವಾದ. ಅವರು ಕಾನೂನುಬಾಹಿರವಾಗಿದೆ ಎಂದು ಹೇಳುತ್ತಾರೆ. ಹಾಗಿದ್ದರೆ ತೋರಿಸಲಿ ಎಂದು ಹೇಳಿದರು.

ಅಕ್ರಮವೇನಾಗಿದೆ : ಜಿಲ್ಲಾಧಿಕಾರಿಗಳು 2005 ರಲ್ಲಿ ಭೂ ಪರಿವರ್ತನೆ ಮಾಡಿದ್ದು ನಿವೇಶನ ಮಾಡುವ ಮುನ್ನ ಜಮೀನು ಕೃಷಿ ಭೂಮಿಯೇ. ಮಲ್ಲಿಕಾರ್ಜುನ ಸ್ವಾಮಿ ನನ್ನ ಭಾವಮೈದುನ. 2010 ರಲ್ಲಿ ದಾನಪತ್ರ ಕೊಟ್ಟಿದ್ದಾರೆ. ಇದರಲ್ಲಿ ಅಕ್ರಮವೇನಾಗಿದೆ ಎಂದರು.

ಮೂಡಾ ಸದಸ್ಯರೆಲ್ಲಾ ಏನು ಮಾಡುತ್ತಿದ್ದರು : ಕೃಷಿ ಭೂಮಿ ಎಂದು ಕೊಟ್ಟಿದ್ದರೂ ಕೂಡ ತಪ್ಪೇನು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, 2014 ರಲ್ಲಿ ಮೂಡಾ ಜಮೀನು ಅಲ್ಲದೆ ಹೋದರೂ ಕೂಡ ನಿವೇಶನ ಮಾಡಿ ಹಂಚಿದ್ದಾರೆ. ಅದಕ್ಕೆ ನಾವು ಸುಮ್ಮನೆ ಬಿಡಬೇಕಾ. ಬದಲಿ ನಿವೇಶನ ಕೇಳಿದ್ದು ಇಂಥ ಜಾಗದಲ್ಲಿಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ. ಆಗ ಮೂಡಾ ಸದಸ್ಯರೆಲ್ಲಾ ಏನು ಮಾಡುತ್ತಿದ್ದರು. ಬಿಜೆಪಿ ಸರ್ಕಾರವೇ ಇತ್ತು ಆಗ. ಕಾನೂನು ಪ್ರಕಾರ ನಮಗೆ ಬೇರೆ ಜಮೀನು ಕೊಡಬೇಕು. ಇದೇ ರೀತಿಯಲ್ಲಿ ಸುಂದರಮ್ಮ ಪ್ರಕರಣದಲ್ಲಿ ಅವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಉಚ್ಚ ನ್ಯಾಯಾಲಯ ಅಷ್ಟು ಜಾಗವನ್ನೂ ಕೊಡಲು ಆದೇಶಿಸಿ ಒಂದು ಲಕ್ಷ ರೂಪಾಯಿ ದಂಡವನ್ನೂ ಮೂಡಾಗೆ ಹಾಕಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೂಡಾ ತಪ್ಪು ಮಾಡಿದ್ದರೆ ಯಾರು ಜವಾಬ್ದಾರರು. ಸಿದ್ದರಾಮಯ್ಯ ಜವಾಬ್ದಾರರೇ? ಒಂದು ವೇಳೆ ಇದನ್ನು ರದ್ದು ಮಾಡಿದರೆ. ಭೂಸ್ವಾಧೀನ ಕಾಯ್ದೆ ಪ್ರಕಾರ ಪರಿಹಾರ ನೀಡಬೇಕಲ್ಲವೇ. ಅದರ ಪ್ರಕಾರ 57 ಕೋಟಿಯಾದರೆ ಬಡ್ಡಿ ಸೇರಿಸಿ 62 ಕೋಟಿಯಾಗುತ್ತದೆ. ಮೂಡಾದವರು 62 ಕೋಟಿ ಕೊಡಬೇಕಾಗುತ್ತದೆ ಎಂದರು. 2021ರಲ್ಲಿ ನಾನು ವಿರೋಧ ಪಕ್ಷದ ನಾಯಕ ಇದ್ದೆ. ಆಗ ನಾನು ಹೇಳಿದ್ದನ್ನು ಕೇಳಿ ಮಾಡುತ್ತಿದ್ದರೆ ಎಂದು ಪ್ರಶ್ನಿಸಿದರು.

ನೋಟೀಸು ನೀಡಿದರೆ ಉತ್ತರ : ಅಬ್ರಹಾಂ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣಾ ಆಯೋಗ ನೋಟೀಸು ನೀಡಿದರೆ ಉತ್ತರ ಕೊಡಲಾಗುವುದು ಎಂದರು.

ಷಡ್ಯಂತ್ರಕ್ಕೆಲ್ಲ ನಾನು ಹೆದರುವುದಿಲ್ಲ : ಸುಮ್ಮಸುಮ್ಮನೆ ರಾಜಕೀಯ ಕಾರಣಕ್ಕೆ ಆರೋಪ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದು ಬಿಜೆಪಿಯ ಎಲ್ಲರಿಗೂ ಹೊಟ್ಟೆಯುರಿ. ಅದಕ್ಕಾಗಿ ಕುತಂತ್ರ ಮಾಡುತ್ತಿದ್ದಾರೆ. ಇಂಥ ಷಡ್ಯಂತ್ರಕ್ಕೆಲ್ಲ ನಾನು ಹೆದರುವುದಿಲ್ಲ ಎಂದರು.

ನಮ್ಮ ಪ್ರಕರಣ ಹಗರಣವಲ್ಲ ಸಿಎಂ ಸ್ಪಷ್ಟನೆ : ಮೂಡಾ ಮೊದಲಿನಿಂದಲೂ ಗಬ್ಬೆದ್ದು ಹೋಗಿದ್ದು, ಅದನ್ನು ಸ್ವಚ್ಛ ಮಾಡಬೇಕಿದೆ. ನಮ್ಮ ಪ್ರಕರಣ ಹಗರಣವಲ್ಲ. ನಮ್ಮ ಜಮೀನು ಬಳಕೆ ಮಾಡಿದ್ದಾರೆ. ಅವರ ಪ್ರಕರಣದಲ್ಲಿ ಭೂಮಿ ಕಳೆದುಕೊಂಡವರು ಅಥವಾ 50: 50 ಅನುಪಾನದಲ್ಲಿ ಜಮೀನು ಕೊಟ್ಟಿದ್ದಾರೆ. ನಾವು ಹಾಗೇ ಕೊಟ್ಟಿದ್ದೇವೆಯೇ? ಈ ವತ್ಯಾಸವನ್ನು ಅರ್ಥಮಾಡಿಕೊಳ್ಳಬೇಕು. ನಿವೇಶನ ಮಾಡಿದರೆ ಮೊದಲು 60:40 ಅನುಪಾತವಿತ್ತು. ಈಗ 50: 50 ಮಾಡಿದ್ದಾರೆ ಇದನ್ನು ಯಾರು ಮಾಡಿದ್ದು ಎಂದರು.

ದುರುಪಯೋಗ ತಡೆಯಲು ತನಿಖೆ : 2020 ನೇ ಇಸವಿಯಲ್ಲಿ ಮೂಡಾ ಅಲ್ಲದೇ ಬೇರೆ ಅಭಿವೃದ್ಧಿ ಪ್ರಾಧಿಕಾರಗಳಲ್ಲಿಯೂ 50:50 ಅನುಪಾತ ಜಾರಿಗೆ ಬಂದಿದೆ. ಇದರಿಂದ ಅಭಿವೃದ್ಧಿ ಪ್ರಾಧಿಕಾರಗಳಿಗೆ ಲಾಭವಾಗುತ್ತದೆಯೇ ಹೊರತು ನಷ್ಟವಾಗುವುದಿಲ್ಲ. ಭೂಮಾಲೀಕರಿಗೆ ನಷ್ಟವುಂಟಾಗಬಾರದು ಎಂದು ತನಿಖೆ ನಡೆಸಲಾಗುತ್ತಿದೆ. ಮೂಡಾ ಆಯುಕ್ತರು ಮತ್ತಿತರರು ಇದನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. ಈ ದುರುಪಯೋಗ ತಡೆಯಲು ತನಿಖೆ ನಡೆಸಿ ಸರಿಮಾಡುತ್ತೇವೆ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…

4 hours ago

ಹುಬ್ಬೆ ಹುಣಸೆ ಡ್ಯಾಂ ಭರ್ತಿ, ಇದು ಮಾದಪ್ಪನ ಕೃಪೆ ಎಂದ ಶಾಸಕ ಮಂಜುನಾಥ್

ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…

4 hours ago

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

8 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

8 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

8 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

8 hours ago