Mysore
27
haze

Social Media

ಬುಧವಾರ, 11 ನವೆಂಬರ್ 2026
Light
Dark

ನಾವು ಅವರ ಮಕ್ಕಳೇ ಬಿಡಿ; ವಿಜಯೇಂದ್ರಗೆ ಸಿಎಂ ಡಿಕೆಶಿ ತಿರುಗೇಟು!

ಮೈಸೂರು: ಕಾಂಗ್ರೆಸ್‌ ಕಾರ್ಯಕರ್ತರ ಕುರಿತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಹೌದು ರೀ, ನಾವು ಅವರ ಮಕ್ಕಳೇ ಬಿಡಿ’ ಎಂದು ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ನಾಯಕರು ತಮ್ಮ ಬಗ್ಗೆ ಹಾಗೂ ಕಾಂಗ್ರೆಸ್‌ ಪಕ್ಷದ ಬಗ್ಗೆ ನೀಡುತ್ತಿರುವ ಹೇಳಿಕೆಗಳ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು.

‘ನಮ್ಮ ಬಗ್ಗೆ, ನಮ್ಮ ಪಕ್ಷದ ಬಗ್ಗೆ ಏನು ಬೇಕಾದರೂ ಮಾತನಾಡಲಿ. ಎಲ್ಲವೂ ನನಗೆ ಗೊತ್ತಿದೆ’ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅಧಿಕಾರ ಹಂಚಿಕೆ ಕುರಿತು ಮಹತ್ವದ ಮಾಹಿತಿ ನೀಡಿದ ಅವರು, ಇಂದು 500 ಕಾರ್ಯಕರ್ತರಿಗೆ ನಿಗಮ–ಮಂಡಳಿಗಳಲ್ಲಿ ವಿವಿಧ ಹುದ್ದೆಗಳನ್ನು ನೀಡುವುದಾಗಿ ಘೋಷಿಸಿದರು.

ನಿಗಮ–ಮಂಡಳಿಗಳ ಸದಸ್ಯರು ಮತ್ತು ನಿರ್ದೇಶಕರ ನೇಮಕಾತಿ ಪಟ್ಟಿ ಸಿದ್ಧವಾಗಿದ್ದು, ಈಗಾಗಲೇ ಸಹಿ ಹಾಕಿರುವುದಾಗಿ ತಿಳಿಸಿದ್ದಾರೆ. ಪಟ್ಟಿಯ ವರ್ಗೀಕರಣ ಪ್ರಕ್ರಿಯೆ ನಡೆಯುತ್ತಿದ್ದು, ಅದು ಪೂರ್ಣಗೊಂಡ ಬಳಿಕ ಸಂಜೆ ಬಿಡುಗಡೆ ಮಾಡುವುದಾಗಿ ಹೇಳಿದರು.

ಒಟ್ಟು ಮೂರು ಹಂತಗಳಲ್ಲಿ ಅಧಿಕಾರ ಹಂಚಿಕೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಸದಸ್ಯರು ಹಾಗೂ ನಿರ್ದೇಶಕರ ನೇಮಕ ನಡೆಯಲಿದ್ದು, ಮುಂದಿನ ಎರಡು ಪಟ್ಟಿಗಳಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದು ವಿವರಣೆ ನೀಡಿದರು.

ಕೆಲವು ಶಾಸಕರಿಗೂ ಸ್ಥಾನ ನೀಡಬೇಕಿದ್ದು, ಅವರಿಗೂ ಅವಕಾಶ ಕಲ್ಪಿಸುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದರು.

Tags:
error: Content is protected !!