ಮೈಸೂರು: ಕಾಂಗ್ರೆಸ್ ಕಾರ್ಯಕರ್ತರ ಕುರಿತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಹೌದು ರೀ, ನಾವು ಅವರ ಮಕ್ಕಳೇ ಬಿಡಿ’ ಎಂದು ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ನಾಯಕರು ತಮ್ಮ ಬಗ್ಗೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ನೀಡುತ್ತಿರುವ ಹೇಳಿಕೆಗಳ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು.
‘ನಮ್ಮ ಬಗ್ಗೆ, ನಮ್ಮ ಪಕ್ಷದ ಬಗ್ಗೆ ಏನು ಬೇಕಾದರೂ ಮಾತನಾಡಲಿ. ಎಲ್ಲವೂ ನನಗೆ ಗೊತ್ತಿದೆ’ ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಗೆ ಅಧಿಕಾರ ಹಂಚಿಕೆ ಕುರಿತು ಮಹತ್ವದ ಮಾಹಿತಿ ನೀಡಿದ ಅವರು, ಇಂದು 500 ಕಾರ್ಯಕರ್ತರಿಗೆ ನಿಗಮ–ಮಂಡಳಿಗಳಲ್ಲಿ ವಿವಿಧ ಹುದ್ದೆಗಳನ್ನು ನೀಡುವುದಾಗಿ ಘೋಷಿಸಿದರು.
ನಿಗಮ–ಮಂಡಳಿಗಳ ಸದಸ್ಯರು ಮತ್ತು ನಿರ್ದೇಶಕರ ನೇಮಕಾತಿ ಪಟ್ಟಿ ಸಿದ್ಧವಾಗಿದ್ದು, ಈಗಾಗಲೇ ಸಹಿ ಹಾಕಿರುವುದಾಗಿ ತಿಳಿಸಿದ್ದಾರೆ. ಪಟ್ಟಿಯ ವರ್ಗೀಕರಣ ಪ್ರಕ್ರಿಯೆ ನಡೆಯುತ್ತಿದ್ದು, ಅದು ಪೂರ್ಣಗೊಂಡ ಬಳಿಕ ಸಂಜೆ ಬಿಡುಗಡೆ ಮಾಡುವುದಾಗಿ ಹೇಳಿದರು.
ಒಟ್ಟು ಮೂರು ಹಂತಗಳಲ್ಲಿ ಅಧಿಕಾರ ಹಂಚಿಕೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಸದಸ್ಯರು ಹಾಗೂ ನಿರ್ದೇಶಕರ ನೇಮಕ ನಡೆಯಲಿದ್ದು, ಮುಂದಿನ ಎರಡು ಪಟ್ಟಿಗಳಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದು ವಿವರಣೆ ನೀಡಿದರು.
ಕೆಲವು ಶಾಸಕರಿಗೂ ಸ್ಥಾನ ನೀಡಬೇಕಿದ್ದು, ಅವರಿಗೂ ಅವಕಾಶ ಕಲ್ಪಿಸುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಈ ಬಾರಿಯ ದೀಪಾವಳಿ ಜಾತ್ರಾ ಮಹೋತ್ಸವ ಮಲೆ ಮಹದೇಶ್ವರ ಬೆಟ್ಟದ…
ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ರೂಪುಗೊಳ್ಳುವ ಸಾಧ್ಯತೆ ಇದೆ. ನವೆಂಬರ್ 13ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ…
ಗುವಾಹಟಿ: ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್ ರೈಲೊಂದು ಹಳಿತಪ್ಪಿದ ಪರಿಣಾಮ ಕೆಲ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಅಸ್ಸಾಂನ ಡಿಗಾರು ರೈಲು ನಿಲ್ದಾಣದ ಬಳಿ…
ಬೆಂಗಳೂರು: ಪಡಿತರ ಚೀಟಿದಾರರೇ, ಇನ್ನೂ ಇ-ಕೆವೈಸಿ ಮಾಡಿಸಿಲ್ಲವೇ? ನಿಮಗೊಂದು ಸಿಹಿಸುದ್ದಿ! ಇ-ಕೆವೈಸಿ ಪೂರ್ಣಗೊಳಿಸಲು ನಿಗದಿಪಡಿಸಿದ್ದ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ.…
ನವದೆಹಲಿ: 13 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ದೆಹಲಿ ಪೊಲೀಸರು ನೋಟಿಸ್…
ಬೆಂಗಳೂರು: ದೀಪಾವಳಿ ಸಂಭ್ರಮದ ಬೆನ್ನಲ್ಲೇ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಾಗಿದೆ. ನಗರದ ವಾಯು ಗುಣಮಟ್ಟ ಸೂಚ್ಯಂಕ, ಅಂದರೆ ಎಕ್ಯೂಐ, 186ಕ್ಕೆ ತಲುಪಿದೆ.…