ಮೈಸೂರು

ನಾಳೆ ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್‌ ಭೇಟಿಯಾಗಲಿರುವ ಸಿಎಂ, ಡಿಸಿಎಂ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಟ್ಟಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮಂಗಳವಾರ ಮಧ್ಯಾಹ್ನ 1.25ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಲಿದ್ದಾರೆ.

ಹೊಸದಿಲ್ಲಿಯಿಂದ ಕೇರಳಕ್ಕೆ ಮೈಸೂರು ಮಾರ್ಗವಾಗಿ ತೆರಳಲಿರುವ ರಾಹುಲ್‌ಗಾಂಧಿ ಅವರನ್ನು ಇಬ್ಬರು ಒಟ್ಟಾಗಿ ಭೇಟಿ ಮಾಡುತ್ತಿರುವುದು ಕುತೂಹಲ ಮೂಡಿಸಿದೆ. ಎಐಸಿಸಿ ನಾಯಕರೂ ಆದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರು ಹೊಸದಿಲ್ಲಿಯಿಂದ ಹೊರಟು ಮೈಸೂರು ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ ಆಗಮಿಸಲಿದ್ದಾರೆ. ನಂತರ ವಿಶೇಷ ಹೆಲಿಕ್ಯಾಪ್ಟರ್‌ನಲ್ಲಿ ಕೇರಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಮತ್ತೆ ಸಂಜೆ 6 ಕ್ಕೆ ಮೈಸೂರಿಗೆ ಆಗಮಿಸಿ ವಿಶೇಷ ವಿಮಾನದಲ್ಲಿ ಹೊಸದಿಲ್ಲಿಗೆ ಪಯಣ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಒಟ್ಟಿಗೇ ವಿಶೇಷ ವಿಮಾನದಲ್ಲಿ ಮಂಗಳವಾರ ಮಧ್ಯಾಹ್ನ 1.25ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಳ್ಳಲಿದ್ದಾರೆ.

ರಾಹುಲ್ ಗಾಂಧಿ ಅವರು ಕೇರಳದಿಂದ ವಾಪಸ್ ಬರುವ ತನಕವೂ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರ ಸಮಯವನ್ನು ಕಾಯ್ದಿರಿಸಲಾಗಿದೆ. ಎರಡು ಬಾರಿ ಹೊಸದಿಲ್ಲಿಗೆ ತೆರಳಿದ್ದ ಸಿದ್ದರಾಮಯ್ಯ ಅವರಿಗೆ ರಾಹುಲ್ ಅವರು ವಿದೇಶ ಪ್ರವಾಸದಲ್ಲಿದ್ದ ಕಾರಣ ಭೇಟಿ ಸಾಧ್ಯವಾಗಿರಲಿಲ್ಲ. ಮಂಗಳವಾರ ಈ ಇಬ್ಬರು ಸಚಿವ ಸಂಪುಟ ಪುನಾರಚನೆ, ಬಜೆಟ್ ತಯಾರಿ ಇನ್ನಿತರ ಅಂಶಗಳನ್ನು ಕುರಿತು ಚರ್ಚಿಸಲಿದ್ದು, ಸಿಎಂ ಗ್ರೀನ್ ಸಿಗ್ನಲ್ ಪಡೆಯಬಹುದೆಂದು ಮೂಲಗಳು ಹೇಳಿವೆ. ಸಿಎಂ ಜತೆಗೆ ಡಿಸಿಎಂ ಕೂಡ ಒಟ್ಟಿಗೇ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತಿರುವುದರಿಂದ ಕುತೂಹಲ ಹೆಚ್ಚಿಸಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದ ಮಹಿಳೆ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು…

2 mins ago

ನಟ ಕಿಚ್ಚ ಸುದೀಪ್‌ ವಿರುದ್ಧ ಮತ್ತೊಂದು ದೂರು ದಾಖಲು

ರಾಮನಗರ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಮತ್ತು ಅದರ ನಿರೂಪಕ ನಟ ಕಿಚ್ಚ ಸುದೀಪ್‌ ವಿರುದ್ಧ…

36 mins ago

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ…

59 mins ago

ಓದುಗರ ಪತ್ರ: ಚಾ.ಬೆಟ್ಟ: ಮೂಲ ಸ್ವರೂಪಕ್ಕೆ ಧಕ್ಕೆಯಾಗದಿರಲಿ

ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…

5 hours ago

ಓದುಗರ ಪತ್ರ: ಕೆಎಚ್‌ಬಿ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…

5 hours ago

ಓದುಗರ ಪತ್ರ: ಬೈಕ್ ಟ್ಯಾಕ್ಸಿ ಚಾಲಕರು ನಿಯಮ ಪಾಲಿಸಲಿ

ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ…

5 hours ago