Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಚಾಮುಂಡಿಗೆ ರೇಷ್ಮೆ ಸೀರೆ ಕೊಟ್ಟು ಹರಕೆ ತೀರಿಸಿದ ಸಿಎಂ-ಡಿಸಿಎಂ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ನಾಡದೇವತೆಗೆ ಸಿಎಂ ಹಾಗೂ ಡಿಸಿಎಂ ತಲಾ 2 ಸಾವಿರ ಕಾಣಿಗೆ ನೀಡಿದರು. ಅಲ್ಲದೆ ತಾಯಿ ಚಾಮುಂಡಿಗೆ ಹಸಿರು ಮತ್ತು ಕೆಂಪು ರೇಷ್ಮೆ ಸೀರೆ ಅರ್ಪಣೆ ಮಾಡಿ, ಗ್ಯಾರಂಟಿ ಕಾರ್ಡ್ ಇಟ್ಟು ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಬಳಿಕ ಈಡುಗಾಯಿ ಹೊಡೆದು ಇಬ್ಬರೂ ಹರಕೆ ತೀರಿಸಿದರು.

ಸರ್ಕಾರ 100 ದಿನ ಪೂರೈಸಿದ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಮಗೆ ಇದೇನು ಸವಾಲು ಎನ್ನಿಸಲಿಲ್ಲ. ಗ್ಯಾರೆಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ. ಮಾತು ಕೊಟ್ಟಂತೆ ಗ್ಯಾರೆಂಟಿಗಳ ಜಾರಿ ಮಾಡುತ್ತಿದ್ದೇವೆ. ಖುದ್ದು ಪಿಎಂ ಕೂಡ ಗ್ಯಾರೆಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಆದರೆ ಸರ್ಕಾರ ರಾಜ್ಯ ಯಾವ ದಿವಾಳಿಯೂ ಆಗಿಲ್ಲ.

ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ. ಗೃಹ ಲಕ್ಷ್ಮಿಗೆ ವಾರ್ಷಿಕ 32 ಸಾವಿರ ಕೋಟಿ ಖರ್ಚಾಗುತ್ತೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ