ಮೈಸೂರು

ಸಾಮಾಜಿಕ ಕಾಳಜಿಯುಳ್ಳ ಸಿನಿಮಾ ಕಣ್ಮರೆ : ಸಿ.ಎಂ ವಿಷಾಧ

ಮೈಸೂರು : ಈಗ ಸಾಮಾಜಿಕ ಕಾಳಜಿಯುಳ್ಳ ಸಿನಿಮಾಗಳು ಕಣ್ಮರೆಯಾಗಿವೆ. ಹೀಗಾಗಿ ಸಿನಿ ಪ್ರಿಯರು ಕೂಡ ಸಿನಿಮಾ ನೋಡುವುದನ್ನು ಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಷಾಧಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 2018 ಮತ್ತು 19 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದರು.

ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜ ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿ ಎಂದು ಕರೆ ನೀಡಿದರು.

ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ‌ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ. ಸದ್ಯ ಬಾಕಿ ಇರುವ ಎಲ್ಲಾ ವರ್ಷದ ಸಬ್ಸಿಡಿಯನ್ನೂ ಒಟ್ಟಿಗೇ ನೀಡಲಾಗುವುದು ಎಂದರು.

ಇದನ್ನೂ ಓದಿ:-ಡಿಸೆಂಬರ್‌ ಅಂತ್ಯಕ್ಕೆ ಗ್ರೇಟರ್‌ ಮೈಸೂರು ಚಾಲ್ತಿ : ನಗರಾಭಿವೃದ್ಧ ಸಚಿವ ಸುರೇಶ್‌

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿ ಮಾಡಲು 160 ಎಕರೆ ಜಾಗವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಎರಡು ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.

ಹಿಂದಿನ ಸರ್ಕಾರ ಆಯಾ ವರ್ಷವೇ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸದ ಕಾರಣಕ್ಕೇ 2018ರ ಸಾಲಿನಿಂದ ಪ್ರಶಸ್ತಿಗಳು ಬಾಕಿ ಉಳಿದಿವೆ. ಇದು ತಪ್ಪು ಹೀಗಾಗಬಾರದು. ಆದ್ದರಿಂದ ನಮ್ಮ ಸರ್ಕಾರ ಇನ್ನು ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚಿಸಲಾಗಿದೆ ಎಂದರು.

ಆಯಾ ವರ್ಷದ ಸಿನಿಮಾಗಳಿಗೆ ಮರು ವರ್ಷವೇ ಕೊಟ್ಟರೆ ಮಾತ್ರ ಅರ್ಥಪೂರ್ಣ ಆಗಿರುತ್ತದೆ. ಇಂದು ಎರಡು ವರ್ಷದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಹಳೆ ಸರ್ಕಾರದ ಅವಧಿಯ ಇನ್ನೆರಡು ವರ್ಷದ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಬಳಿಕ ಆಯಾ ವರ್ಷದ ಪ್ರಶಸ್ತಿಗಳನ್ನು ಮರು ವರ್ಷದ ಆರಂಭದಲ್ಲೇ ನೀಡಲು ವೇದಿಕೆಯಲ್ಲೇ ಸೂಚನೆ ನೀಡಿದರು.

ಮೊದಲೆಲ್ಲಾ ಸಿನಿಮಾಗಳ ಸಂಖ್ಯೆ ಕಡಿಮೆ ಇತ್ತು. ನಾವು ನೋಡಿದ್ದನ್ನೇ ಮತ್ತೆ ಮತ್ತೆ ನೋಡುತ್ತಿದ್ದೆವು. ಈಗ ಸಿಕ್ಕಾಪಟ್ಟೆ ಸಿನಿಮಾಗಳು ಬರುತ್ತಿವೆ. ಆದರೆ, ಸಾಮಾಜಿಕ ಕಾಳಜಿ ಮತ್ತು ಗುಣಮಟ್ಟ ಕಡಿಮೆ ಆಗುತ್ತಿದೆ. ಆದ್ದರಿಂದ ಈಗ ಸಿನಿಮಾ ನೋಡುವುದನ್ನೇ ಕಡಿಮೆ ಮಾಡಿದ್ದೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

2 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

2 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

2 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

2 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

2 hours ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

2 hours ago