Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಲಕ್ಷ ವೃಕ್ಷ ಯೋಜನಾ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಮೈಸೂರು: ಮೈಸೂರಿನಲ್ಲಿ ಆಯೋಜಿಸಿದ್ದ ಲಕ್ಷ ವೃಕ್ಷ ಯೋಜನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜೂ.15) ಚಾಲನೆ ನೀಡಿದರು.

ನಗರದ ರಾಜೀವ್ ಸ್ನೇಹ ಬಳಗ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಲಕ್ಷ ವೃಕ್ಷ ಯೋಜನಾ ಕಾರ್ಯಕ್ರಮದಲ್ಲಿ ಅರಳಿ ಗಿಡಕ್ಕೆ ನೀರೆರೆಯುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಈ ವೇಳೆ ಸುತ್ತೂರು ಶ್ರೀಗಳಾದ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಈಶ್ವರ್ ಖಂಡ್ರೆ ಹಾಗೂ ಶಾಸಕರಾದ ತನ್ವೀರ್ ಸೇಠ್ ಮತ್ತು ಕಾಂಗ್ರೆಸ್ ಮುಖಂಡ ಪಿ.ರಾಜೀವ್ ಸೇರಿ ಹಲವರು ಉಪಸ್ಥಿತರಿದ್ದರು.

Tags: