cm siddaramiah
ಮೈಸೂರು : ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಇಂದಿರಾ ಗಾಂಧಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಭವನದ ನಿರ್ಮಾಣ ಕಾರ್ಯ ಒಂದು ವರ್ಷದಲ್ಲಿ ಮುಗಿಯಬೇಕು ಎಂದರು.
ಗ್ರಾಮೀಣ ಮತ್ತು ನಗರ ಜಿಲ್ಲೆಗಳಿಗೆ ಕಾಂಗ್ರೆಸ್ ಪಕ್ಷಕ್ಕೆ ಸ್ವಂತ ಕಟ್ಟಡ ಇರಲಿಲ್ಲ. ದೇವರಾಜ ಅರಸು ಅವರ ಕಾಲದಲ್ಲಿ ಈ ಭೂಮಿಯಲ್ಲಿ ನೀಡಲಾಗಿತ್ತು. ತಿವಾರಿಯವರು ಅವರು ಇದನ್ನು ಜೋಪಾನ ಮಾಡಿದ್ದು, ಕಾಂಗ್ರೆಸ್ ಭವನಕ್ಕೆ ಸಂಕುಸ್ಥಾಪನೆಯಾಗಿರುವುದು ಸಂತೋಷದ ವಿಷಯ ಎಂದರು.
ಶಕ್ತಿ ಮೀರಿ ಎಲ್ಲರೂ ವಂತಿಗೆ ನೀಡಬೇಕು ಕಾಂಗ್ರೆಸ್ಸಿನ ಮುಖಂಡರು, ಕಾರ್ಯಕರ್ತರು, ಅಧ್ಯಕ್ಷರು, ಮಹಿಳೆಯರಿಗೆ, ಅನುಕೂಲವಾಗುವ ಭವ್ಯ ಕಾಂಗ್ರೆಸ್ ಭವನ ನಿರ್ಮಾಣವಾಗುತ್ತಿದೆ.ಇದಕ್ಕೆ ಶಕ್ತಿ ಮೀರಿ ಎಲ್ಲರೂ ವಂತಿಗೆ ನೀಡಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಕಾರ್ಯಕರ್ತರ ವಂತಿಗೆ ಹಣದಿಂದಲೇ ಈ ಭವನ ನಿರ್ಮಾಣವಾಗುತ್ತಿದೆ. ಯತೀಂದ್ರ ಸಿದ್ದರಾಮಯ್ಯ ಅವರು ಕಟ್ಟಡ ಸಮಿತಿಗೆ ಸಂಚಾಲಕರಾಗಿದ್ದು, ಅಧ್ಯಕ್ಷರೂ ಸೇರಿದಂತೆ ಎಲ್ಲರೂ ಶ್ರಮ ಹಾಗೂ ಮುತುವರ್ಜಿ ವಹಿಸಿ ಕಟ್ಟಡವನ್ನು ಒಂದು ವರ್ಷದೊಳಗೆ ನಿರ್ಮಾಣವಾಗುವಂತೆ ವ್ಯವಸ್ಥೆ ಮಾಡಬೇಕು. ಕಾರ್ಯಕರ್ತರು ಕೂಡ ಎಲ್ಲ ರೀತಿಯ ಸಹಕಾರವನ್ನು ನೀಡಬೇಕು ಎಂದರು.
ಕರ್ನಾಟಕದಲ್ಲಿ ಮೊದಲನೇ ಬಾರಿಗೆ ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಭವನ ನಿರ್ಮಾಣವಾಗುತ್ತಿದೆ. ಇದು ಸಂತಷದ ವಿಷಯ ಎಂದರು. ಕಾಂಗ್ರೆಸ್ಸಿನ ಎಲ್ಲಾ ಮುಖಂಡರು ಶಕ್ತ್ಯಾನುಸಾರ ದೇಣಿಗೆ ನೀಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಮಾಜಿ ಶಾಸಕರ ತಂದೆ 5 ಲಕ್ಷ ದೇಣಿಗೆ ಮಾಜಿ ಶಾಸಕ ಮಂಜುನಾಥ್ ಅವರ ತಂದೆ ಪ್ರೇಮ್ ಕುಮಾರ್ ಅವರು ಐದು ಲಕ್ಷ ರೂಪಾಯಿಗಳ ದೇಣಿಗೆ ನೀಡಿದ್ದು, ಅವರಿಗೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಧನ್ಯವಾದಗಳನ್ನು ತಿಳಿಸಿದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…